ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಸೀದಿಗಳಲ್ಲಿ ಆಜಾನ್ (Azan) ಕೂಗುವುದರಿಂದ ಶಬ್ಧಮಾಲಿನ್ಯ ಉಂಟಾಗುತ್ತಿದೆ. ಹಾಗಾಗಿ ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ಹಲವೆಡೆ ಆಜಾನ್ ಕೂಗುವುದನ್ನು ನಿಷೇಧಿಸಲಾಗಿದೆ. ಮೊಬೈಲ್ ಆ್ಯಪ್‌ಗಳನ್ನು ಬಳಸಿ ಆಜಾನ್ ಕೂಗುವಂತೆ ಮಸೀದಿಗಳಿಗೆ ಸರ್ಕಾರ ಸೂಚಿಸಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಶಬ್ಧಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಅದೇಶ ಪಾಲಿಸುವಂತೆ ಮುಸ್ಲಿಮರಿಗೆ ಸರ್ಕಾರ ಹೇಳಬೇಕು. ಸರ್ಕಾರದ ಆದೇಶದಂತೆ ಮಸೀದಿಗಳು ನಡೆದುಕೊಳ್ಳಬೇಕು ಎಂದರು.
es
ಹಲವು ರಾಷ್ಟ್ರಗಳಲ್ಲಿ ನಿಷೇಧ
ಮುಸ್ಲಿಂ ರಾಷ್ಟ್ರಗಳೂ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಆಜಾನ್ ಕೂಗುವುದನ್ನು ನಿಷೇಧಿಸಲಾಗಿದೆ. ಮಹಾರಾಷ್ಟ್ರದಲ್ಲಿ 1500ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ಸರ್ಕಾರ ತೆರವುಗೊಳಿಸಿದೆ. ಆಧುನಿಕ ತಂತ್ರಜ್ಞಾನದೊಂದಿಗೆ ಮೊಬೈಲ್‌ನಲ್ಲಿಯೇ ಆಜಾನ್ ಕರೆ ಕೇಳಲು ಅವಕಾಶವಿದೆ. ಇದಕ್ಕಾಗಿ ಕಲೀಂ ಪಠಾಣ್ ಎಂಬುವವರು ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸಿದ್ದು, ಇದನ್ನು ಅಳವಡಿಸಿಕೊಂಡರೆ ಆಜಾನ್ ಕಿರಿಕಿರಿ ತಪ್ಪುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮರೆಯಾದ ಮಳೆ, ಹೊಸನಗರ, ತೀರ್ಥಹಳ್ಳಿಯಲ್ಲಿ ಉತ್ತಮ ವರ್ಷಧಾರೆ
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಮಹಾಲಿಂಗ ಶಾಸ್ತ್ರಿ, ಕೆ.ಈ. ಕಾಂತೇಶ್, ಇ. ವಿಶ್ವಾಸ್, ನಾಗರಾಜ್, ಮೋಹನ್ ಜಾಧವ್ ಸೇರಿದಂತೆ ಹಲವರು ಇದ್ದರು.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















