ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಿವಮೊಗ್ಗ ರಂಗಾಯಣವು (rangayana) ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಮೂರು ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.
ಪಾರಂಪರಿಕ ಕಲೆಯ ಕುಟುಂಬಗಳಿಂದ ಬಂದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ತಂತ್ರಜ್ಞರು ಮತ್ತು ಕಲಾವಿದರು ಆಯಾ ರಂಗಾಯಣದ ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುತ್ತಾರೆ.

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಶಿವಮೊಗ್ಗ ರಂಗಾಯಣ, ಸುವರ್ಣ ಸಂಸ್ಕೃತಿ ಭವನ, ಹೆಲಿಪ್ಯಾಡ್ ಹತ್ತಿರ, ಅಶೋಕನಗರ ಇವರಿಂದ ಖುದ್ದಾಗಿ ಪಡೆಯಬಹುದು. ಫೇಸ್ಬುಕ್ ಐಡಿ Shivamogga Rangayana ಅಥವಾ ವೆಬ್ಸೈಟ್ rangayanashivamogga.karnataka.gov.in ಮೂಲಕವು ಅರ್ಜಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ » ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್
ಭರ್ತಿ ಮಾಡಿದ ಅರ್ಜಿಯನ್ನು ಜುಲೈ 25 ರೊಳಗಾಗಿ ರಂಗಾಯಣ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ admin.rangayanashivamogga@gmail.com ಮೂಲಕ ಸಲ್ಲಿಸುವಂತೆ ರಂಗಾಯಣದ ಆಡಳಿತಾಧಿಕಾರಿ ಎ.ಸಿ. ಶೈಲಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-256353 ನ್ನು ಸಂಪರ್ಕಿಸುವುದು.

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





