ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಮರದ ದಿಮ್ಮಿಗಳನ್ನು (Timber) ಮಣ್ಣಿನ ದಿಬ್ಬದಿಂದ ಕೆಳಗೆ ಉರುಳಿಸುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಸಮೀಪದ ಕೊಳವಾರ ಗ್ರಾಮದಲ್ಲಿ ಸೋಮವಾರ ಘಟನೆ ಸಂಭವಿಸಿದೆ.
ಶಿವಮೊಗ್ಗ ತಾಲೂಕಿನ ಸಕ್ರೆಬೈಲು ನಿವಾಸಿ ಎಸ್.ಟಿ.ಯೋಗೇಂದ್ರ ಗೌಡ (52) ಮೃತರು. ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಲ್ವರು ಕಾರ್ಮಿಕರು ಅಕೇಶಿಯಾ ಮರದ ದಿಮ್ಮಿಗಳನ್ನು ದಿಬ್ಬದಿಂದ ಕೆಳಗಿಳಿಸುತ್ತಿದ್ದರು.

ಈ ವೇಳೆ ಯೋಗೇಂದ್ರ ಅವರು ಕಾಲು ಜಾರಿ ಕೆಳಗೆ ಬಿದ್ದಿದ್ದು, ದಿಮ್ಮಿಯೊಂದು ಅವರ ಮೇಲೆ ಉರುಳಿ ತಲೆಗೆ ಗಂಭೀರ ಗಾಯವಾಗಿದೆ. ಸ್ಥಳದಲ್ಲಿದ್ದವರು ತಕ್ಷಣ ಅವರನ್ನು ಜೆ.ಸಿ.ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಾರ್ಗ ಮಧ್ಯೆ ಅವರು ಅಸುನೀಗಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಬೈಕುಗಳು ಮುಖಾಮುಖಿ ಡಿಕ್ಕಿ, ಶಾಲೆ ಮುಖ್ಯೋಪಾಧ್ಯಾಯ ಸಾವು

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















