ಪತ್ನಿಯ ಮೂಗನ್ನೆ ಕಚ್ಚಿ ತುಂಡರಿಸಿದ ಪತಿ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾದ ಮಹಿಳೆ

ಶಿವಮೊಗ್ಗ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು (Nose) ಕಚ್ಚಿ ತುಂಡರಿಸಿದ್ದಾನೆ. ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತುಂಡಾದ ಮೂಗಿನೊಂದಿಗೆ ಪತ್ನಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದಾಳೆ.

Crime-News-General-Image

Crime-News-General-Image

ಸಾಲದ ವಿಚಾರವಾಗಿ ಕಿರಿಕ್

ವಿಜಯ್ ಮತ್ತು ವಿದ್ಯಾ ದಂಪತಿ ಧರ್ಮಸ್ಥಳ ಸ್ವಸಹಾಯ ಸಂಘದಿಂದ ₹2 ಲಕ್ಷ ಸಾಲ ಪಡೆದಿದ್ದರು. ಇಬ್ಬರು ಸೇರಿ ಕಂತು ಕಟ್ಟುತ್ತಿದ್ದರು. ಕಳೆದ ಎರಡು ವಾರ ಹಣವಿಲ್ಲದ್ದರಿಂದ ವಿದ್ಯಾ ಸಾಲದ ಕಂತು ಪಾವತಿಸಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಂಘದವರು ಪತಿ ವಿಜಯ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಈ ವಿಚಾರವಾಗಿ ದಂಪತಿ ಮಧ್ಯೆ ಜಗಳವಾಗಿತ್ತು ಎಂದು ಆರೋಪಿಸಲಾಗಿದೆ.

ಹೆಂಡತಿಯ ಮೂಗನ್ನೇ ಕಚ್ಚಿದ ಗಂಡ

ಜಗಳದ ಸಂದರ್ಭ ವಿದ್ಯಾಳ ಮೂಗನ್ನೇ ಪತಿ ವಿಜಯ್ ಕಚ್ಚಿ ತುಂಡರಿಸಿದ್ದಾನೆ. ಸ್ಥಳೀಯರು ಗಲಾಟೆ ಬಿಡಿಸಿದ್ದಾರೆ‌. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ.

ಈ ಹಿನ್ನೆಲೆ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಪ್ರಕರಣವನ್ನು ಚನ್ನಗಿರಿ ಠಾಣೆಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ » ಭದ್ರಾ ಜಲಾಶಯದ ಗೇಟುಗಳು ಓಪನ್, ಎಷ್ಟು ನೀರು ಹೊಳೆಗೆ ಹರಿಸಲಾಗ್ತಿದೆ?

Leave a Comment