ಕುಬಟೂರು ಬಳಿ ಬೈಕುಗಳ ಡಿಕ್ಕಿ, ಶಿಕ್ಷಕಿಯ ಕಾಲಿಗೆ ಗಂಭೀರ ಗಾಯ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸೊರಬ: ಶಾಲೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಶಿಕ್ಷಕಿಗೆ (Teacher) ಎದುರಿನಿಂದ ಬೈಕ್‌ ಡಿಕ್ಕಿ ಹೊಡೆದಿದೆ. ಶಿಕ್ಷಕಿಯ ಬಲಗಾಲಿಗೆ ಗಂಭೀರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿಕ್ಷಕಿ ರತ್ನಾ ಅವರು ಶಾಲೆ ಕರ್ತವ್ಯ ಮುಗಿಸಿಕೊಂಡು ಮಧ್ಯಾಹ್ನ ಸೊರಬ ತಾಲೂಕು ತಿಮ್ಮಾಪುರದ ಮನೆಗೆ ಹಿಂತಿರುಗುತ್ತಿದ್ದರು. ಕುಬಟೂರು ಸಮೀಪ ರತ್ನಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಎದುರಿನಿಂದ ಆಟೋ ಬರುತಿತ್ತು. ರಸ್ತೆಯ ಎಡ ಬದಿಯಲ್ಲಿ ಗುಂಡಿ ಇದ್ದಿದ್ದರಿಂದ ರತ್ನಾ ತಮ್ಮ ದ್ವಿಚಕ್ರ ವಾಹನವನ್ನು ರಸ್ತೆ ಎಡಬದಿಯಲ್ಲಿ ನಿಲ್ಲಿಸಿಕೊಂಡು, ಆಟೋ ಹೋದ ಮೇಲೆ  ತೆರಳಲು ಅನುವಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ACCIDENT-NEWS-GENERAL-IMAGE.

ಇದನ್ನೂ ಓದಿ » ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿ ಬದಲು ಮತ್ತೊಬ್ಬ ಯುವಕ ಹಾಜರು, ಕೇಸ್‌ ದಾಖಲು, ಸಿಕ್ಕಿಬಿದ್ದಿದ್ದು ಹೇಗೆ?

ಈ ಸಂದರ್ಭ ಎದುರಿನಿಂದ ವೇಗವಾಗ ಬಂದ ಬೈಕ್‌ ಆಟೋವನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ರತ್ನಾ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ರತ್ನಾ ಅವರ ಬಲಗಾಲಿಗೆ ಗಂಭೀರ ಗಾಯವಾಗಿದೆ. ಸ್ಥಳೀಯರು ಅವರನ್ನು ಆನವಟ್ಟಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಶಸ್ತ್ರಚಿಕಿತ್ಸೆ ಅಗತ್ಯವಿದ್ದರಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ಸಂದರ್ಭ ಡಿಕ್ಕಿ ಹೊಡೆದ ಬೈಕ್‌ನ ಸವಾರ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದ. ಆದರೆ ಈತನ ಆತನ ವೆಚ್ಚ ಭರಿಸದ ಹಿನ್ನೆಲೆ ಶಿಕ್ಷಕಿ ದೂರು ನೀಡಿದ್ದಾರೆ. ಆನವಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment