ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್ ಫೋನ್ ಪತ್ತೆಯಾಗಿ ಅಚ್ಚರಿ ಮೂಡಿಸಿತ್ತು. ಇದರ ಬೆನ್ನಿಗೆ ಮತ್ತೊಬ್ಬ ಖೈದಿ ಬಳಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಮ್ ಕಾರ್ಡ್ (Sim Card) ಮತ್ತು ತಗಡಿನ ವಸ್ತು ಸಿಕ್ಕಿದೆ.
ಮೊಬೈಲ್ ನುಂಗಿದ್ದ ಖೈದಿ
10 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಇದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ಮೊದಲು ಸುದ್ದಿ ಪ್ರಕಟಿಸಿತ್ತು. ಶಿವಮೊಗ್ಗ ಜೈಲಿನ ಖೈದಿಯ ಹೊಟ್ಟೆಯೊಳಗೆ ಮೊಬೈಲ್ ಫೋನ್ ಪತ್ತೆ..!

ಸಿಮ್ ಕಾರ್ಡ್, ತಗಡಿನ ವಸ್ತು ಪತ್ತೆ
ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಉಮೈದ್ (29) ಎಂಬಾತನನ್ನು ಪುತ್ತೂರಿನ ನ್ಯಾಯಾಲಯಕ್ಕೆ ಕರೆದೊಯ್ಯಬೇಕಿತ್ತು. ಈ ವೇಳೆ ಆತನ ತಪಾಸಣೆ ಮಾಡಿದಾಗಿ ಪ್ಯಾಂಟ್ ಜೇಬಿನಲ್ಲಿ ಸಿಮ್ ಕಾರ್ಡ್ ಮತ್ತು ತಡಗಡಿನ ವಸ್ತು ವಸ್ತು ಪತ್ತೆಯಾಗಿದೆ. ಈ ಸಂಬಂಧ ಜೈಲು ಭದ್ರತೆಯ ಉಸ್ತುವಾರಿ ಹೊತ್ತಿರುವ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಜೈಲು ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಲೇಔಟ್ ಮೇಲೆ ಪೊಲೀಸ್ ರೇಡ್, ಗಾಂಜಾ ಪ್ಯಾಕಿಂಗ್ ಮಾಡ್ತಿದ್ದ ಇಬ್ಬರು ಅರೆಸ್ಟ್
ಖೈದಿಯ ಬಳಿ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದು ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಜೈಲು ಅಧೀಕ್ಷಕ ರಂಗನಾಥ.ಪಿ ಅವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















