ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ. ಕಾರ್ಯದರ್ಶಿ ಕುಮಾರನಾಯ್ಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಮಧ್ಯಾಹ್ನ ಗ್ರಾಮ ಪಂಚಾಯಿತಿ ಕಚೇರಿಯ ಕಾರ್ಯದರ್ಶಿಯ ಕೊಠಡಿಯಲ್ಲಿ ಕುಮಾರನಾಯ್ಕ ₹3000 ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ದಾಳಿಯಾಗಿದೆ.
ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್ ಇತಿಹಾಸ
ಶ್ರೀರಾಮಪುರ ಗ್ರಾಮದ ವಿನೋದ್ ಎಂಬುವವರ ತಾಯಿಯ ಹೆಸರಿನಲ್ಲಿದ್ದ ನಿವೇಶದನಲ್ಲಿ ಮನೆ ನಿರ್ಮಿಸಿದ್ದರು. ಇದರ ಈ ಸ್ವತ್ತು ಮಾಡಿಕೊಡಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರನಾಯ್ಕ ₹3000ಗೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವಿನೋದ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದು ಹಣ ಕೇಳಿದ್ದರ ಆಡಿಯೋವನ್ನು ಒದಗಿಸಿದ್ದರು ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಾಯುಕ್ತ ಅಧೀಕ್ಷಕ ಮಂಜುನಾಥ ಚೌದರಿ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ಬಿ.ಪಿ.ಚಂದ್ರಶೇಖರ್, ಇನ್ಸ್‌ಪೆಕ್ಟರ್‌ಗಳಾದ ಗುರುರಾಜ್ ಎನ್.ಮೈಲಾರ್, ಕೆ.ಪಿ.ರುದ್ರೇಶ್, ಸಿಬ್ಬಂದಿ ಯೋಗೇಶ್, ಟೀಕಪ್ಪ, ಸುರೇಂದ್ರ, ಮಂಜುನಾಥ್, ಬಿ.ಟಿ.ಚನ್ನೇಶ್, ದೇವರಾಜ್, ಪ್ರಕಾಶ್ ಬಾರಿದಮರ, ಅರುಣ್ ಕುಮಾರ್, ಅಂಜಲಿ, ಚಂದ್ರಿಬಾಯಿ, ಗೋಪಿ, ಪ್ರದೀಪ್, ಜಯಂತ್ ಭಾಗವಹಿಸಿದ್ದರು.
LATEST NEWS
- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು















