ಭದ್ರಾವತಿಯಲ್ಲಿ ಭದ್ರಾ ನದಿಗೆ ತಡೆಗೋಡೆ, ಎಲ್ಲೆಲ್ಲಿ ನಿರ್ಮಾಣವಾಗಲಿದೆ? ಎಷ್ಟು ಕೋಟಿಯ ಯೋಜನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹರಿಯುವ ಭದ್ರಾ ನದಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಡೆಗೋಡೆ  (retaining wall) ನಿರ್ಮಿಸಲು ₹50 ಕೋಟಿ ಅನುದಾನ ಬಿಡುಗಡೆಯಾಗಿದೆ. ಜಲಸಂಪನ್ಮೂಲ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಕೆ. ಶುಭಾ ಇದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

ಶಾಸಕರ ಕಚೇರಿ ಪ್ರಕಟಣೆಯ ಪ್ರಕಾರ, ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಈ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

BHADRAVATHI-MLA-BK-SANGAMESHWARA.

ತಡೆಗೋಡೆಗೆ ಸ್ಥಳೀಯರ ಒತ್ತಾಯವಿತ್ತು

ಭದ್ರಾ ನದಿಯು ನಗರದ ಹೃದಯ ಭಾಗದಲ್ಲಿ ಸುಮಾರು 3 ಕಿ.ಮೀ.ಗಳಷ್ಟು ಹರಿಯುತ್ತದೆ. ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದಾಗ, ನದಿಯ ಎಡ ಮತ್ತು ಬಲ ದಂಡೆಗಳಲ್ಲಿರುವ ಅಂಬೇಡ್ಕರ್ ಕಾಲೊನಿ, ಗೌಳಿಗರ ಬೀದಿ, ಚಾಮೇಗೌಡ ಏರಿಯಾ, ಗುಂಡೂರಾವ್ ಶೆಡ್, ಮತ್ತು ಯಕಿನ್ಸಾ ಕಾಲೊನಿಗಳ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯುಂಟಾಗುತ್ತಿತ್ತು. ಇದರಿಂದ ಸ್ಥಳೀಯ ನಿವಾಸಿಗಳು ನದಿಯ ಎರಡೂ ಬದಿಯಲ್ಲಿ ತಡೆಗೋಡೆ ನಿರ್ಮಿಸುವಂತೆ ನಿರಂತರವಾಗಿ ಮನವಿ ಮಾಡುತ್ತಿದ್ದರು.

June-2025-Report-Shivamogga-Live-New-New.

ಎಲ್ಲೆಲ್ಲಿ ತಡೆಗೋಡೆ ನಿರ್ಮಾಣವಾಗುತ್ತೆ?

ಈ ಯೋಜನೆಯ ಅಡಿ ಗೌಳಿಗರ ಬೀದಿ ಮತ್ತು ಚಾಮೇಗೌಡ ಏರಿಯಾದಲ್ಲಿ ತಲಾ 400 ಮೀಟರ್, ಯಕಿನ್ಸಾ ಕಾಲೊನಿಯಲ್ಲಿ 125 ಮೀಟರ್ ಮತ್ತು ಗುಂಡೂರಾವ್ ಶೆಡ್‌ನಲ್ಲಿ 190 ಮೀಟರ್ ಸೇರಿದಂತೆ ಒಟ್ಟು 1,115 ಮೀಟರ್ ಉದ್ದದ ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ತಡೆಗೋಡೆ ನಿರ್ಮಾಣದಿಂದ ಈ ಪ್ರದೇಶಗಳ ನೂರಾರು ಕುಟುಂಬಗಳಿಗೆ ಪ್ರವಾಹದ ಭೀತಿಯಿಂದ ಮುಕ್ತಿ ಸಿಗಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 19, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment