ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ (Admission) ಸಂಬಂಧಿಸಿದಂತೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆಹ್ವಾನಿಸಲಾದ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಇಲ್ಲಿದೆ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 8
- ಮೆರಿಟ್ ಆಧಾರಿತ ಪಟ್ಟಿ ಬಿಡುಗಡೆ: ಆಗಸ್ಟ್ 18
- ಪ್ರವೇಶಾತಿ ಕೌನ್ಸಿಲಿಂಗ್:
- ಮೆರಿಟ್ ಮತ್ತು ಸ್ಪೆಷಲ್ ಕೆಟಗರಿ: ಆಗಸ್ಟ್ 20
- ಮೆರಿಟ್ ಕಮ್ ಪೇಮೆಂಟ್: ಆಗಸ್ಟ್ 21
- ವರ್ಗಾವಣೆಗೆ ಕೊನೆಯ ದಿನಾಂಕ: ಆಗಸ್ಟ್ 22
ಈ ಕುರಿತು ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ವಿಸ್ತರಿಸಿದ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಧಿಕಾರಿಗಳಿಂದಲೇ ಕಡತಗಳಿಗೆ ಬೆಂಕಿ ಆರೋಪ, ಕಚೇರಿ ಮುಂದೆ ದಿಢೀರ್ ಹೋರಾಟ


