ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ (National President) ಅಂಕುರ್ ಜುಂಜುನ್ವಾಲಾ ಅವರು ಜು.23ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಸಿಐ ಜಿಲ್ಲಾಧ್ಯಕ್ಷ ಜಿ. ಗಣೇಶ್ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಧಿಕಾರಿಗಳಿಂದಲೇ ಕಡತಗಳಿಗೆ ಬೆಂಕಿ ಆರೋಪ, ಕಚೇರಿ ಮುಂದೆ ದಿಢೀರ್ ಹೋರಾಟ
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸರ್ಕಾರಿ ನೌಕರರ ಭವನದವರೆಗೆ ಕಾರ್ ಮತ್ತು ಬೈಕ್ ರ್ಯಾಲಿ ಮೂಲಕ ಅಂಕುರ್ ಜುಂಜುನ್ವಾಲಾ ಅವರನ್ನು ಕರೆತರಲಾಗುವುದು ಎಂದು ತಿಳಿಸಿದರು.
ಏನೆಲ್ಲ ಕಾರ್ಯಕ್ರಮ ಇರಲಿದೆ?
- ಜೆಸಿಐ ಶಿವಮೊಗ್ಗ ರಾಯಲ್ಸ್ ವತಿಯಿಂದ ಸರ್ಕಾರಿ ನೌಕರರ ಭವನದಲ್ಲಿ ಸ್ವಾಗತ ಫಲಕ ಅನಾವರಣ.
- ಜೆಸಿಐ ಸಮೃದ್ಧಿಯಿಂದ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ ಕೊಡುಗೆ.

- ಅಂಕುರ್ ಜುಂಜುನ್ವಾಲಾ ಅವರನ್ನು ಕರೆತರುವ ಮಾರ್ಗ ಮಧ್ಯೆ ಸಹ್ಯಾದ್ರಿ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನ ಆಚರಣೆ.
- ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲೆಯ ಎಲ್ಲ ಜೆಸಿಐ ಘಟಕಗಳ ಅಧ್ಯಕ್ಷರೊಂದಿಗೆ ಸಭೆ. ಈ ಸಭೆಯಲ್ಲಿ ವಲಯ 24ರ ಅಧ್ಯಕ್ಷ ಸಿ.ಎ. ಗೌರೀಶ್ ಭಾರ್ಗವ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಲಯ 24ರ ಪದಾಧಿಕಾರಿಗಳು, ಸುದರ್ಶನ್ ತಾಯಿ ಮನೆ, ಜಿಲ್ಲೆಯ ಎಲ್ಲ ಘಟಕಗಳ ಅಧ್ಯಕ್ಷರು ಉಪಸ್ಥಿರಿರಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ರೇಖಾ ರಂಗನಾಥ್, ಎಸ್. ಎಂ. ಸ್ವಾತಿ, ಶಿಲ್ಪಾ ಸತೀಶ್, ವಿಜಯಕುಮಾರ್, ನಿವೇದಿತಾ ವಿಕಾಸ್, ಸ್ಮಿತಾ ಮತ್ತಿತರರು ಉಪಸ್ಥಿತರಿದ್ದರು.
LATEST NEWS
- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

About The Editor
ನಿತಿನ್ ಆರ್.ಕೈದೊಟ್ಲು





