ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಆಭರಣ ಉದ್ಯಮಿಯ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ನಗರದ ಮಾರ್ಕೆಟ್ ರಸ್ತೆಯಲ್ಲಿ ಬಂಗಾರದ ಆಭರಣ (Gold) ಸಿದ್ಧಪಡಿಸುವ ಉದ್ಯಮ ನಡೆಸುತ್ತಿದ್ದ ನಿತಿನ್ ಶೇಟ್ (34) ಅವರು ಸೋಮವಾರ ಬೆಳಿಗ್ಗೆ ತಾಲೂಕಿನ ಎಡಜಿಗಳೇಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರದಪುರದ ಸಮೀಪದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಭಾನುವಾರ ಮಧ್ಯಾಹ್ನ ವರದಪುರದ ಶ್ರೀಧರಾಶ್ರಮಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದರು. ನಂತರ ಅವರ ಬೈಕ್ ಜಿಗಳೇಮನೆ ಮುಖ್ಯ ರಸ್ತೆಯ ಪಕ್ಕದಲ್ಲಿ ಪತ್ತೆಯಾಗಿದೆ. ರಾತ್ರಿ ಸ್ಥಳೀಯರು ಅವರಿಗಾಗಿ ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ಆದರೆ ಸೋಮವಾರ ಬೆಳಿಗ್ಗೆ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Sagara-Nitin-Shet-gold-jewels.

ಸದ್ಯ ನಿತಿನ್‌ ಸಾವಿನ ಹಿಂದಿನ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ

June-2025-Report-Shivamogga-Live-New-New.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment