ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಮಿನಿಸ್ಟರ್‌ ದಿಢೀರ್‌ ಭೇಟಿ, ಏನೆಲ್ಲ ಪರಿಶೀಲಿಸಿದರು? ಏನೇನು ಸೂಚಿಸಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ:  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಆಸ್ಪತ್ರೆಯಲ್ಲಿನ ಒಳರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ದಾಖಲಾಗಿದ್ದವರ ಆರೋಗ್ಯ ವಿಚಾರಿಸಿದರು.

ವಾಸ್ತವಾಂಶ ತಿಳಿಯುವ ಪ್ರಯತ್ನ

ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಚಿಕಿತ್ಸೆ, ವೈದ್ಯರ ಲಭ್ಯತೆ, ಸಿಬ್ಬಂದಿಯ ವರ್ತನೆ, ಔಷಧಿ, ಕುಡಿಯುವ ನೀರು, ಊಟೋಪಹಾರದ ಸೌಲಭ್ಯ ಹಾಗೂ ಸ್ವಚ್ಛತೆಯ ಬಗ್ಗೆ ರೋಗಿಗಳಿಂದಲೇ ವಾಸ್ತವಾಂಶ ತಿಳಿದುಕೊಳ್ಳುವ ಪ್ರಯತ್ನ ಮಾಡಿದರು.

m5

ಇದನ್ನೂ ಓದಿ » ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಬೈಕಿನಲ್ಲಿ ಹಿಂಬಾಲಿಸಿ ಮಾಂಗಲ್ಯ ಸರ ಅಪಹರಣ, ಅದೃಷ್ಟವಶಾತ್‌ ಮಹಿಳೆ ಪಾರು

ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಒಳರೋಗಿಗಳ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ, ಜನರಲ್ ಮೆಡಿಸಿನ್ ವಾರ್ಡ್ ಸೇರಿದಂತೆ ವಿವಿಧ ವಿಭಾಗಗಳಿಗೆ ಸಚಿವರು ಭೇಟಿ ನೀಡಿದರು. ರೋಗಿಗಳು, ಅವರ ಸಂಬಂಧಿಕರು ಮಾತ್ರವಲ್ಲದೆ ಆಸ್ಪತ್ರೆಯ ನಾನ್-ಕ್ಲಿನಿಕಲ್ ಸಿಬ್ಬಂದಿಯೊಂದಿಗೂ ಮಾತನಾಡಿ ಮನವಿ ಸ್ವೀಕರಿಸಿದರು.

m3

ಮೆಗ್ಗಾನ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತು ಹಾಗೂ ಚಿಕಿತ್ಸಾ ವ್ಯವಸ್ಥೆ ಲಭ್ಯವಿರುವುದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ಪಕ್ಕದ ಜಿಲ್ಲೆಗಳಿಂದಲು ರೋಗಿಗಳು ಬರುತ್ತಿದ್ದಾರೆ. ಒಳರೋಗಿಗಳ ವಾರ್ಡ್‌ಗೆ ತೆರಳಿದ್ದ ವೇಳೆ ಬೇರೆ ಬೇರೆ ಜಿಲ್ಲೆಯವರು ಮಾತಿಗೆ ಸಿಕ್ಕರು. ಹೀಗಾಗಿ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಿದೆ. ಇದು ಸಮಸ್ಯೆಗಳ ಉದ್ಭವಕ್ಕೆ ಕಾರಣವಾಗಿದೆಮಧು ಬಂಗಾರಪ್ಪ, ಸಚಿವ

ಆಸ್ಪತ್ರೆ ಸುಧಾರಣೆಗೆ ಸೂಚನೆ

ಮೆಗ್ಗಾನ್‌ ಆಸ್ಪತ್ರೆಯ ವೀಕ್ಷಣೆ ನಂತರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆಸ್ಪತ್ರೆ ಸುಧಾರಣೆಗೆ ಹಲವು ಸೂಚನೆ ನೀಡಿದರು.

 

  • ಹೊಸ ಒಪಿಡಿ ಕೌಂಟರ್ ನಿರ್ಮಾಣಕ್ಕೆ ಅಂದಾಜುಪಟ್ಟಿ ಸಿದ್ಧಪಡಿಸಲು ಸೂಚನೆ.

 

  • ಬೇಡಿಕೆ ಇರುವುದರಿಂದ ಐದು ಡಯಾಲಿಸಿಸ್ ಯಂತ್ರಗಳು ಹಾಗೂ ಡಾರ್ಮೆಟರಿ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲು ಸೂಚನೆ.

m2

 

  • ಹೆರಿಗೆ ವೇಳೆ ತಾಯಿ-ಮಗುವಿನ ಮರಣ ಪ್ರಮಾಣ ಕಡಿಮೆ ಮಾಡಲು ಪರಿಣಾಮಕಾರಿ ಕ್ರಮ ವಹಿಸಬೇಕು. ಹೊರ ಜಿಲ್ಲೆಗಳಿಂದ ಬರುವ ಗರ್ಭಿಣಿಯರು ಇಲ್ಲಿ ಪ್ರಸವವಾಗುವ ಕುರಿತಾದ ಮಾಹಿತಿ ನೀಡಬೇಕು.

 

  • ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೆಂಟಿಲೇಟರ್‌ಗಳ ಮಾಹಿತಿ ನೀಡಬೇಕು.

 

  • ಎನ್‌ಐಸಿಯು ಎಂಸಿಎಚ್ (ತಾಯಿ ಮತ್ತು ಮಕ್ಕಳ ವಿಭಾಗ) ಬ್ಲಾಕ್ ವಿವರ, ಒಬಿಜಿ, ಪಿಡಿಯಾಟ್ರಿಕ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪ್ರಸ್ತಾವ ಸಿದ್ಧಪಡಿಸಲು ಸೂಚಿಸಿದರು.

June-2025-Report-Shivamogga-Live-New-New.

ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕ ವಿರೂಪಾಕ್ಷಪ್ಪ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್, ಡಾ. ಎಸ್. ಶ್ರೀಧರ್, ಮುಖಂಡರಾದ ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್ ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 22, 2025

Leave a Comment