ಶಿವಮೊಗ್ಗ ಲೈವ್
ಚಿಕ್ಕಮಗಳೂರು: ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನ (Train) ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಬಳಿ ಘಟನೆ ನಡೆದಿದೆ. ತರಿಕೆರೆ ರೈಲ್ವೆ ನಿಲ್ದಾಣದಿಂದ ಮೈಸೂರಿನ ಕಡೆಗೆ ಹೊರಟ ರೈಲು ಶಿವಪುರ ಬಳಿ ತೆರಳುತ್ತಿದ್ದಾಗ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಯಾಕೆ?

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ರೈಲಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಿಲ್ಲ. ರೈಲಿನ ಬ್ರೇಕ್ ಜಾಮ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ » ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ನಡುರಾತ್ರಿ ಬೆಂಕಿ

