ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೇಲಿನ ತುಂಗಾನಗರದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಮಣಿಕಂಠನ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (Arrest). ಕ್ಷುಲಕ ವಿಚಾರಕ್ಕೆ ಸಹೋದರನೆ ಮಣಿಕಂಠನ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.
ಇದನ್ನೂ ಓದಿ » ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್
ಮಣಿಕಂಠನ ತಮ್ಮ ಸಂತೋಷ್ (31) ಎಂಬಾತನನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮುಂದುವರೆಸಿದ್ದಾರೆ.
ಹತ್ಯೆಗೆ ಕಾರಣವೇನು?
ಮೇಲಿನ ತುಂಗಾನಗರದ ಮನೆಯಲ್ಲಿ ಮಣಿಕಂಠ (38) ಮತ್ತು ಸಂತೋಷ್ ಇಬ್ಬರು ವಾಸವಿದ್ದರು. ತನ್ನ ಮನೆಗೆ ಬರಬೇಡ ಎಂದು ಸಂತೋಷ್‌ಗೆ ಮಣಿಕಂಠ ಹೇಳಿದ್ದ. ಇದೇ ವಿಚಾರವಾಗಿ ಶನಿವಾರ ರಾತ್ರಿ ಇಬ್ಬರ ಮಧ್ಯೆ ಜಗಳವಾಗಿದೆ ಎಂದು ಆರೋಪಿಸಲಾಗಿದೆ.

ಜಗಳದ ವೇಳೆ ಸಂತೋಷ್, ಮಣಿಕಂಠನ ತಲೆಗೆ ಸಲಾಕೆಯಿಂದ ಹೊಡೆದಿದ್ದಾನೆ. ಆತ ಕುಸಿದು ಬಿದ್ದ ನಂತರ ಮನೆ ಹೊರಗಿದ್ದ ದೊಡ್ಡ ಕಲ್ಲು ತಂದು ತಲೆ ಮೇಲೆ ಹಾಕಿ ಪರಾರಿಯಾಗಿದ್ದ ಎಂದು ಆರೋಪಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಆರೋಪಿ ಸಂತೋಷನನ್ನು ಪತ್ತೆ ಹಚ್ಚಿ, ಬಂಧಿಸಿದ್ದಾರೆ.

Police Arrest Santosh
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















