ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಆಗಸ್ಟ್ 3 ರಂದು ಸಂಜೆ 4ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ (Employees) ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಶಾರದಾ ಪೂರ್ಯನಾಯ್ಕ, ಎಸ್.ಎನ್.ಚನ್ನಬಸಪ್ಪ ಪ್ರತಿಭಾ ಪುರಸ್ಕಾರ ನಡೆಸಿಕೊಡಲಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ. 400 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.

ಪತ್ರಕರ್ತ ರಂಗನಾಥ್ ಭಾರದ್ವಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾ ನುಡಿ ಆಡಲಿದ್ದಾರೆ. ಜಿಲ್ಲಾ ಸಂಘದ ಅಧ್ಯಕ್ಷ ಆರ್.ಮೋಹನ್ ಕುಮಾರ್, ಶಾಸಕರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕಿಸ್ ಬಾನು, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಮಿಥುನ್ ಕುಮಾರ್, ಜಿಪಂ ಸಿಇಒ ಎನ್.ಹೇಮಂತ್, ಪಾಲಿಕೆ ಆಯುಕ್ತ ಮಾಯಣ್ಣಗೌಡ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮೋಹನ್ ಕುಮಾರ್, ಪಾಪಣ್ಣ, ನರಸಿಂಹ ಮೂರ್ತಿ ಮತ್ತಿತರರಿದ್ದರು.

felicitation for Government employees children
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು














