BREAKING NEWS | ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗಾಜನೂರು ಅಗ್ರಹಾರದ ಬಳಿ ಇಂದು ಬೆಳಗಿನ ಜಾವ ಅಪಘಾತ (Mishap) ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ

ಖಾಸಗಿ ಬಸ್ಸಿನ ನಿರ್ವಾಹಕ ಅಣ್ಣಪ್ಪ ಮೃತರಾಗಿದ್ದಾರೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಸೇರಿ ವಿವಿಧೆಡೆ ದಾಖಲು ಮಾಡಲಾಗಿದೆ.

Bus-Truck-Mishap-near-Gajanuru-in-Shimoga

ಉಮೇಶ್(50), ಪ್ರಸಾದ್(40), ವಿಷ್ಣು(21), ಮಂಜುನಾಥ್ (45), ಸುಜಾತಾ(40), ಅನಂದ್ ನಾಯ್ಕ್(50), ನೀಲಾಂಬಿಕಾ(45), ಪ್ರಸಾದ್ (43), ಬಿಂದು(20), ಶಶಾಂಕ್ (20), ಲಕ್ಷ್ಮೀ(35), ಶ್ರೀರಾಮುಲು(42) ಹಾಗೂ ಕಾರ್ತಿಕ್ (32) ಎಂಬುವರು ಗಾಯಗೊಂಡಿದ್ದಾರೆ.

ಖಾಸಗಿ ಬಸ್‌ ಮಂಗಳೂರಿನಿಂದ ಚಳ್ಳಕೆರೆಗೆ ತೆರಳುತಿತ್ತು ಎಂದು ತಿಳಿದು ಬಂದಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಎಡ ಬದಿ ಸಂಪೂರ್ಣ ಹಾನಿಯಾಗಿದೆ. ಸೀಟುಗಳು ಕಿತ್ತು ಬಂದಿವೆ. 

ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯಿಂದಾಗ ಈ ಭಾಗದಲ್ಲಿ ರಸ್ತೆ ಸಂಚಾಕ್ಕೆ ಅಡಚಣೆಯಾಗಿತ್ತು.

Bus-Truck-Mishap-near-Gajanuru-in-Shimoga

Bus-Truck-Mishap-near-Gajanuru-in-Shimoga

Bus-Truck-Mishap-near-Gajanuru-in-Shimoga

June-2025-Report-Shivamogga-Live-New-New.

Mishap Near Gajanuru Agrahara in Shimoga taluk

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment