ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯುವ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಏನೆಲ್ಲ ಹೇಳಿದರು?

  • ಯುವ ಸಮೂಹ ಮಾದಕ ವ್ಯಸನಗಳ ಅಡಿಯಾಳಾಗದೆ ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡಲು ಕಂಕಣ ಬದ್ದರಾಗಬೇಕು.

  • ವೈಯೋಸಹಜ ವ್ಯಾಮೋಹಗಳಿಂದ ಶುರುವಾಗುವ ಕೆಲವು ದುಶ್ಚಟಗಳು, ಹಂತವಾಗಿ ನಮ್ಮ ದೇಹವನ್ನು ಆಕ್ರಮಿಸಿಕೊಳ್ಳುತ್ತದೆ. ಇದರಿಂದ ಸಮಾಜದಲ್ಲಿ ಗೌರವ ಇಲ್ಲವಾಗುತ್ತದೆ. ಯಾವುದೇ ಕೌಶಲ್ಯಾಧಾರಿತ ಚಿಂತನೆ ಮಾಡಲಾಗದೆ ಅಧೋಗತಿಗೆ ಬಂದು ತಲುಪಿಬಿಡುತ್ತಾರೆ.

ATNCC-College-Programme-SP-Mithun-Kumar.

  • ಕಳೆದ ವರ್ಷ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಗಾಂಜಾ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ನಗರ ಪ್ರದೇಶಗಳಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

  • ಪೊಲೀಸ್ ಇಲಾಖೆ ಒಂದೇ ಎಲ್ಲವನ್ನು ಸರಿ ಪಡಿಸುತ್ತದೆ ಎಂಬ ಯೋಚನೆಗಿಂತ, ಸಮಾಜದ ಪ್ರಜೆಗಳಾಗಿ ಸುಸ್ಥಿರ ವಾತಾವರಣ ನಿರ್ಮಾಣ ಮಾಡಲು ಏನೆಲ್ಲಾ ಕೊಡುಗೆ ನೀಡಬಹುದು ಎಂಬುದನ್ನು ಸೂಕ್ಷ್ಮವಾಗಿ ಯೋಜಿಸಿ.

  • ಅಮೂಲ್ಯವಾದ ಬದುಕನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿ. ಹೆಲ್ಮೆಟ್, ಸೀಟ್ ಬೆಲ್ಟ್ ನಂತಹ ಸೂಕ್ಷ್ಮ ವಿಚಾರಗಳ ಬಗೆಗಿನ ಅಸಡ್ಡೆ ದೊಡ್ಡ ಅನಾಹುತಗಳಿಗೆ ಕಾರಣವಾಗುತ್ತಿದ್ದು, ಸುರಕ್ಷಿತವಾಗಿ ವಾಹನಗಳನ್ನು ಚಲಾಯಿಸಿ ಎಂದು ಸಲಹೆ ನೀಡಿದರು.

ದೇಹದ ಪ್ರಕೃತಿಗೆ ಸಮಸ್ಯೆಯಾದಾಗ ಪ್ರಕೃತಿಯ ಹಾಗೆಯೇ ಸ್ವಯಂ ನಿಯಂತ್ರಿಸಿಕೊಳ್ಳಲು ಪ್ರಯತ್ನಿಸುತ್ತದೆ. ಮಾದಕ ದ್ರವ್ಯವು ದೇಹದ ಪ್ರಕೃತಿಯಲ್ಲಿ ಅಸಹಜ ಬೆಳವಣಿಗೆಗೆ ಕಾರಣವಾಗಿ, ಸಮತೋಲನ ತಪ್ಪಲು ಕಾರಣವಾಗುತ್ತದೆ. ಒಮ್ಮೆ ಶುರುವಾದ ವ್ಯಸನದಿಂದ ಹೊರಬರುವ ದಾರಿಯೇ ಕಾಣದಾಗುತ್ತದೆ‌. ಮನಸ್ಸಿನ ಭಾವನೆಗಳ ನಿಯಂತ್ರಣ ಮತ್ತು ಜಾಗೃತಿಯೇ ಇದಕ್ಕಿರುವ ಔಷಧವೇ ವಿನಃ ಬೇರೆ ಯಾವ ಔಷಧೀಯು ಇಲ್ಲ.ಎಸ್.ಎನ್.ನಾಗರಾಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ

ಇದನ್ನೂ ಓದಿ » ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು?

ಗ್ರಾಮೀಣ ಭಾಗದಲ್ಲಿ ಈ ಅಭಿಯಾನ ವಿಸ್ತರಣೆಗೊಳ್ಳಬೇಕಿದೆ. ವಿದ್ಯಾರ್ಥಿಗಳ ಜೊತೆಗೆ ಪ್ರತಿಯೊಬ್ಬ ಪ್ರಜೆಯು ಈ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಸದೃಢ ಭಾರತ ನಿರ್ಮಾಣ ಮಾಡಲು ಶಕ್ತರಾಗೋಣ.ಪ್ರೊ.ಎನ್.ಕೆ.ಹರಿಯಪ್ಪ, ಎನ್ಇಎಸ್ ಕುಲಸಚಿವ

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಶುಭಾ ಮರುವಂತೆ, ಗೃಹ ರಕ್ಷಕದಳದ ನಿಕಟಪೂರ್ವ ಜಿಲ್ಲಾ ಸಮಾದೇಷ್ಟರಾದ ಚಂದನ್ ಪಟೇಲ್, ಎನ್ಎಸ್ಎಸ್ ಘಟಕ ಅಧಿಕಾರಿ ಮಂಜುನಾಥ್.ಎನ್, ಪ್ರವೀಣ್.ಬಿ.ಎನ್, ಗಾಯತ್ರಿ.ಟಿ, ಯುವ ರೆಡ್ ಕ್ರಾಸ್ ವಿಭಾಗ ಸಂಚಾಲಕಿ ಸೌಪರ್ಣಿಕ ಉಮೇಶ್, ಶೃತಿ.ಕೆ, ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಫ್ರಾನ್ಸಿಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

SP Mihtun Kumar Inaugurates programme at ATNCC 

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 20, 2025 at 6:40 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 20, 2025

Leave a Comment