ಯಡೇಹಳ್ಳಿಯಲ್ಲಿ ಅಪಘಾತ, ತೀವ್ರ ಗಾಯಗೊಂಡಿದ್ದ ಯುವಕ ಸಾವು, ಮಾನವೀಯತೆ ಮೆರೆದ ಪೋಷಕರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಹೊಳೆಹೊನ್ನೂರು: ಯಡೇಹಳ್ಳಿಯಲ್ಲಿ ಅಪರಿಚಿತ ಸರಕು ಸಾಗಣೆ ವಾಹನ (Goods Vehicle) ಡಿಕ್ಕಿಯಾಗಿ ಗಾಯಗೊಂಡಿದ್ದ ಬಿ.ಪುನೀತ್‌ ರಾಜ್ (19) ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಯಡೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ದಾಟುವಾಗ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಪುನೀತ್‌ರಾಜ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದಿಂದಾಗಿ ಬಹು ಅಂಗಾಂಗಕ್ಕೆ ಪೆಟ್ಟಾಗಿ ಹಾನಿಯಾಗಿ, ಕೋಮಾ ತಲುಪಿದ್ದರು.

Yadehalli-mishap-youth-donates-eyes- goods vehicle mishap

ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿಕಿತ್ಸೆಗೆ ಸ್ಪಂದಿಸದ ಕಾರಣ ಅಲ್ಲಿಂದ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಮೃತರಿಗೆ ತಂದೆ ಡ್ರೈವರ್ ಬಸವರಾಜ್, ತಾಯಿ ಹೇಮಾವತಿ, ತಮ್ಮ ಮೋಹಿತ್ ರಾಜ್ ಇದ್ದಾರೆ.

ಮಗನ ಸಾವಿನಲ್ಲು ಮಾನವೀಯತೆ

ಮಗ ಬದುಕುಳಿಯುವ ಸಾಧ್ಯತೆ ಕ್ಷೀಣಿಸಿದ್ದರಿಂದ ಕೋಮಾ ಸ್ಥಿತಿಯಲ್ಲಿದ್ದಾಗಲೆ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನ ಮಾಡಲು ಜಾಲತಾಣದಲ್ಲಿ ಮಾಹಿತಿ ಹರಿಬಿಡಲಾಗಿತ್ತು. ಆದರೆ, ಸಕಾಲದಲ್ಲಿ ಯಾರೂ ಸ್ಪಂದಿಸದ ಕಾರಣ ನೇತ್ರದಾನ ಮಾತ್ರ ಮಾಡಲು ಸಾಧ್ಯವಾಗಿದೆ. ಹೆತ್ತವರು ಮಗನ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.

youth succumbed to Goods Vehicle

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment