ಶಂಕರಘಟ್ಟ: ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ‍್ಯಾಂಕಿಂಗ್‌ನಲ್ಲಿ (Ranking) ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ ಎಂದು ಕುವೆಂಪು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿ ರ‍್ಯಾಂಕಿಂಗ್ ನೀಡಲಾಗಿದೆ. ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ ವಿನಿಮಯಕ್ಕೆ 200 ಅಂಕಗಳು, ಮೂಲ ಸೌಕರ್ಯಗಳಿಗೆ 150 ಅಂಕಗಳು, ಆಡಳಿತ ಮತ್ತು ವಿಸ್ತರಣೆಗೆ 150 ಅಂಕ ಹಾಗೂ ವೈವಿಧ್ಯತೆ ಚಟುವಟಿಕೆಗಳಿಗೆ 100 ಅಂಕಗಳನ್ನು ನಿಗದಿಗೊಳಿಸಲಾಗಿತ್ತು.

ಇದನ್ನೂ ಓದಿ » ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್
ಕುವೆಂಪು ವಿವಿ ಒಟ್ಟು 862.25 ಅಂಕಗಳೊಂದಿಗೆ 30ನೇ ಸ್ಥಾನ ಪಡೆದಿದೆ. ಉಳಿದಂತೆ ಕರ್ನಾಟಕದ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ 6ನೇ ಸ್ಥಾನ ಪಡೆದಿದ್ದರೆ, ಮೈಸೂರು ವಿವಿ 8ನೇ ಸ್ಥಾನ ಮತ್ತು ಬೆಂಗಳೂರು ವಿವಿ 24ನೇ ಸ್ಥಾನ ಮತ್ತು ಮಂಗಳೂರು ವಿವಿ 44ನೇ ಸ್ಥಾನ ಪಡೆದು, ದೇಶದ ಟಾಪ್ 50ರೊಳಗೆ ಸ್ಥಾನ ಪಡೆದಿವೆ.
ಕುವೆಂಪು ವಿಶ್ವವಿದ್ಯಾಲಯವು ಕಳೆದ ತಿಂಗಳು ನ್ಯಾಕ್ ನಿಂದ ‘ಎ’ ಶ್ರೇಣಿ ಪಡೆದಿತ್ತು. ಈಗ ಔಟ್ ಲುಕ್- ಐಕೇರ್ ಸಂಸ್ಥೆ ರ‍್ಯಾಂಕಿಂಗ್‌ನಲ್ಲಿ 30ನೇ ಸ್ಥಾನ ಪಡೆದಿದೆ.
ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ
ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ ಕೌನ್ಸಿಲಿಂಗ್ ಆ. 29 ಮತ್ತು 30ಕ್ಕೆ ನಿಗದಿಯಾಗಿದೆ. ವಿದ್ಯಾರ್ಥಿಗಳು ಆ. 22ರವರೆಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದ ಎಂದು ಕುವೆಂಪು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.
Kuvempu University Ranking
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





