ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಹೆಚ್ಚಿದ ಚಳಿ, ಇವತ್ತು ಎಲ್ಲೆಲ್ಲಿ ಹೇಗಿದೆ ಹವಾಮಾನ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಥಂಡಿ ಹೆಚ್ಚಾಗಿದೆ. ಕನಿಷ್ಠ ತಾಪಮಾನ ಕುಸಿತ ಕಂಡಿದ್ದು, ಮೈಕೊರೆಯುವ ಚಳಿ ಇದೆ. (Weather) (ಶಿವಮೊಗ್ಗ ಲೈವ್‌.ಕಾಂ | ಮುಂದಿನ 6 ಪ್ಯಾರಾಗಳು ಕೆಳಗಿವೆ)

ಮಳೆ ಸಂಬಂಧ ರಾಜ್ಯಾದ್ಯಂತ ಯಾವುದೇ ಅಲರ್ಟ್‌ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಘಾ ಮಳೆ ಅಬ್ಬರವು ಕಡಿಮೆಯಾಗಿದೆ. ತಂಪು ವಾತಾವರಣ ಇದ್ದು, ರಾತ್ರಿ ವೇಳೆ ಚಳಿ ತೀವ್ರವಾಗಿದೆ.

ಎಲ್ಲೆಲ್ಲಿ ಹೇಗಿದೆ ತಾಪಮಾನ?

WEATHER-REPORT-SHIMOGA-

  • ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

  • ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

  • ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Shivamogga Weather report 

WEATHER-REPORT-SHIMOGA-

Leave a Comment