ಹೊಸನಗರ: ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ (Short Circuit) ಮನೆಯೊಂದು ಹೊತ್ತಿ ಉರಿದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಹೊಸನಗರ ತಾಲ್ಲೂಕು ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದ ಮನೆಯಲ್ಲಿ ಘಟನೆ ಸಂಭವಿಸಿದೆ.
ಲಕ್ಷ್ಮಣ್ ಗೌಡ ಅವರ ಒಡೆತನದ ಮನೆಯಲ್ಲಿ ಶೇಷ ಪವನ್ ಮತ್ತು ಪ್ರತಿಭಾ ದಂಪತಿ ಬಾಡಿಗೆಗೆ ವಾಸವಾಗಿದ್ದರು. ದಂಪತಿ ಹೊರಗೆ ಹೋಗಿದ್ದಾಗ ಶಾರ್ಟ್ ಸರ್ಕಿಟ್ ಉಂಟಾಗಿ ಮನೆಗೆ ಬೆಂಕಿ ತಗುಲಿದೆ ಎಂದು ಆರೋಪಿಸಲಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ
ಸ್ಥಳೀಯರು ಬೆಂಕಿ ಗಮನಿಸಿ ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ಹಾಗೂ ಹೊಸ ಮನೆ ನಿರ್ಮಾಣಕ್ಕೆ ತಂದಿಟ್ಟಿದ್ದ ₹ 2 ಲಕ್ಷಕ್ಕೂ ಅಧಿಕ ಮೌಲ್ಯದ ಎಲೆಕ್ಟ್ರಿಕಲ್ ವಸ್ತುಗಳು ಸುಟ್ಟು ಕರಕಲಾಗಿವೆ.

ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಎನ್, ಸಿಬ್ಬಂದಿ ಕೆ.ಟಿ. ರಾಜಪ್ಪ, ನರೇಶ್, ಮಂಜುನಾಥ್ ಬಿ, ಆಂಜನೇಯ ಬಿ.ಸಿ, ಭೀಷ್ಮಚಾರಿ, ಪೊಲೀಸ್ ಸಿಬ್ಬಂದಿ ಶಿವಕುಮಾರ್, ಯಶೋದಮ್ಮ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.