ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಕಟ್ಟಬೇಕಿದ್ದ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ (Discount) ನೀಡಿದೆ. ಆದರೆ ಇದಕ್ಕೆ ಷರತ್ತ ವಿಧಿಸಿದೆ.
ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ರಿಯಾಯತಿ ದರದಲ್ಲಿ ದಂಡ ಪಾವತಿಸಬಹುದಾಗಿದೆ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶ ಆದೇಶದಲ್ಲಿ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಷರತ್ತು ವಿಧಿಸಲಾಗಿದೆ.

ಇದನ್ನೂ ಓದಿ » ಇಂಟರ್‌ಸಿಟಿ ರೈಲಿನಲ್ಲಿ ಎರಡು ಅನಾಥ ಬಾಕ್ಸ್, ತೆರೆದಾಗ ಸಿಕ್ತು ಟೆಡ್ಡಿ ಬೇರ್
50 percent Discount for fine







