ಹೊಳೆಹೊನ್ನೂರು: ದಿಢೀರ್ ಕಾರ್ಯಾಚರಣೆ (Raid) ನಡೆಸಿದ ಅಧಿಕಾರಿಗಳು ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ 63 ಪ್ರಕರಣ ದಾಖಲು ಮಾಡಿಕೊಂಡು ₹4800 ದಂಡ ಸಂಗ್ರಹಿಸಿದ್ದಾರೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ಇಂದು ಕಾರ್ಯಾಚರಣೆ ನಡೆಸಲಾಯಿತು. ಇದೇ ವೇಳೆ ಸಾರ್ವಜನಿಕರಿಗೆ ಕೋಟ್ಪಾ ಕಾಯ್ದೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಡೇಂಜರಸ್ ಬೈಕ್ ಸ್ಟಂಟ್, ಯುವಕನಿಗೆ ಪೊಲೀಸರಿಂದ ಶಾಕ್
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್ ರಾಜ್ ಅರಸ್, ರವಿರಾಜ್, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಆನಂದಮೂರ್ತಿ, ಹೊಳೆ ಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
sudden Raid at holehonnuru

