ಶಿವಮೊಗ್ಗ: ನಗರದ ರಾಷ್ಟ್ರೀಯ ಔಷಧ (Pharmacy) ಮಹಾವಿದ್ಯಾಲಯದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಎನ್.ಸಿ.ಪಿ ಕಲಾ ಸಂಗಮ- 2025 ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ನಾರಾಯಣರಾವ್ ಏನೆಲ್ಲ ಹೇಳಿದರು?
- ಆಧುನಿಕತೆಯ ಆಕರ್ಷಣೆಗಳು ಕ್ಷಣಿಕವಾಗಿದ್ದು, ಅದರಿಂದ ಹೊರಬಂದು ಇತಿಹಾಸ ಸೃಷ್ಟಿಸುವ ಆದರ್ಶ ಗುಣಗಳನ್ನು ಯುವ ಸಮೂಹ ರೂಡಿಸಿಕೊಳ್ಳಬೇಕಿದೆ.
- ಕಲಾತ್ಮಕತೆ ಬದುಕಿಗೆ ಅತ್ಯವಶ್ಯಕ. ರಂಗೋಲಿ, ಕಸೂತಿ, ಅಡಿಗೆ, ಸಿಂಗಾರ, ಮನೆಯನ್ನು ಒಪ್ಪ ಮಾಡುವ ಬಗೆ, ಇವೆಲ್ಲವೂ ಒಂದು ಕಲೆ. ಕಲಾತ್ಮಕ ಬದುಕು ಸಂಪನ್ನಗೊಳ್ಳಲು ಅಧ್ಯಯನದ ಬಗೆಗೆ ಆಸಕ್ತಿ ಹಾಗೂ ಎಲ್ಲಾ ರಂಗದಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳಿ.
- ಸಾಹಿತಿಗಳು, ಕಲಾವಿದರು, ರಾಜರು ಎಲ್ಲರು ತಮ್ಮದೆ ವಿದ್ವತ್ ಮೂಲಕ ಸಾಂಸ್ಕೃತಿಕವಾಗಿ ಗಟ್ಟಿಯಾದ ಶಕ್ತಿಯನ್ನು ನಾಡಿಗೆ ನೀಡಿದ್ದಾರೆ. ಅಂತಹ ಸಾಂಸ್ಕೃತಿಕ ಹಿನ್ನಲೆಯನ್ನು ಸದಾ ನೆನಸಿಕೊಳ್ಳಬೇಕು. ವ್ಯಕ್ತಿತ್ವವನ್ನು ನಿರೂಪಿಸಿಕೊಳ್ಳುವಲ್ಲಿ ಕ್ರಿಯಾಶೀಲತೆ ಕಾಪಾಡಲಿದೆ.
- ಹಿರಿತನಕ್ಕೆ ಗೌರವ ನೀಡುವ ಕಲೆ ನಿಮ್ಮದಾಗಲಿ. ಶಿಕ್ಷಣ ಮತ್ತು ಆರೋಗ್ಯ ಜನ ಸಾಮಾನ್ಯರ ಕೈಗೆ ಸಿಗದೆ ದುಬಾರಿಯಾಗುತ್ತದೆ. ಅದರೆ ಎನ್ಇಎಸ್ ಸಂಸ್ಥೆ ಇಂದಿಗೂ ಕೈಗೆಟುಕುವ ಬೆಲೆಯಲ್ಲಿ ಶಿಕ್ಷಣ ನೀಡುತ್ತಿದೆ.
- ಒಳ್ಳೆಯ ಸ್ನೇಹಿತ ಬದುಕಿನ ಔಷಧ. ಕನಸು ಮತ್ತು ಗುರಿಗೆ ಒಂದೇ ವ್ಯತ್ಯಾಸ, ಕನಸು ಕಾಣಲು ನಿದ್ರೆ ಬೇಕು, ಆದರೆ ಗುರಿ ತಲುಪಲು ನಿದ್ದೆಯಿಲ್ಲದೆ ದುಡಿಯಬೇಕು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿದೆ 10 ಸುದ್ದಿಗಳು | 22 ಆಗಸ್ಟ್ 2025
ವಿದ್ಯಾರ್ಥಿ ಹಂತದಲ್ಲಿ ಸಿಗುವ ಸಾಂಸ್ಕೃತಿಕ ವಾತಾವರಣವು ಬದುಕಿನ ಉನ್ನತಿಗೆ ಸಹಕರಿಸುವ ಕೌಶಲ್ಯತೆಗಳನ್ನು ರೂಡಿಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಕ್ರಿಯಾಶೀಲತೆಯು ಮನಸ್ಸಿನ ಆರೋಗ್ಯವನ್ನು ಕಾಪಾಡುವಲ್ಲಿ ಒಂದು ಬಗೆಯ ದಿವ್ಯ ಔಷಧಿ ಎಂಬ ಸತ್ಯವನ್ನು ಫಾರ್ಮಸಿ ವಿದ್ಯಾರ್ಥಿಗಳು ಅರಿಯಬೇಕಿದೆ. ಎಸ್.ಎನ್.ನಾಗರಾಜ, ಎನ್‌ಇಎಸ್ ಕಾರ್ಯದರ್ಶಿ
ಕಾಲೇಜಿನ ಪ್ರಾಂಶುಪಾಲ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಪೃಥ್ವಿ ಗೌಡ ಮುಖ್ಯ ಅತಿಥಿಯಾಗಿದ್ದರು.

Pharmacy college programme
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
