ಶಿವಮೊಗ್ಗ ಲೈವ್
ಸಾಗರ: ವೀಕೆಂಡ್ ಹಿನ್ನೆಲೆ ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆ ಪ್ರವಾಸಿಗರು (Tourist) ಆಗಮಿಸಿದ್ದರು. ಜಲಪಾತದ ವೈಭವ ಕಣ್ತುಂಬಿಕೊಂಡು ಖುಷಿ ಪಟ್ಟರು. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಲಿಂಗನಮಕ್ಕಿ ಜಲಾಶಯದಿಂದ ಕಳೆದ ವಾರ ನೀರು ಹರಿಸಲಾಗಿತ್ತು. ಹಾಗಾಗಿ ಜೋಗ ಜಲಪಾತದಲ್ಲಿ ರಾಜಾ, ರಾಣಿ, ರೋರರ್ ಮತ್ತು ರಾಕೆಟ್ ಜಲಪಾತಗಳು ಭೋರ್ಗರೆಯುತ್ತಿದ್ದವು. ಇದರ ವಿಡಿಯೋಗಳು ವೈರಲ್ ಆಗಿದ್ದವು. ಇದರ ಬೆನ್ನಿಗೆ ಪ್ರವಾಸಿಗರು ಹೆಚ್ಚಳವಾಗಿದ್ದಾರೆ.
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್ ಓಪನ್, ಇಲ್ಲಿದೆ ಫೋಟೊ ರಿಪೋರ್ಟ್
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಜೋಗ ಜಲಪಾತಕ್ಕೆ ಇಂದು ಭಾರಿ ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದರು. ಜಲಪಾತದ ಮುಂದೆ ನಿಂತು ಫೋಟೊ, ಸೆಲ್ಫಿಗೆ ಪೋಸ್ ನೀಡಿದರು. ಶನಿವಾರ ಮತ್ತು ಭಾನುವಾರ ಎರಡು ದಿನ ನಿರಂತರ ರಜೆ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು.



tourist at Jog falls
