ಶಿವಮೊಗ್ಗ ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ರಜೆ, ಕಾಲೇಜಿಗೆ ಎಲ್ಲೆಲ್ಲಿ ರಜೆ ಇದೆ? ಇಲ್ಲಿದೆ ಡಿಟೇಲ್ಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮಳೆ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಐದು ತಾಲೂಕುಗಳಲ್ಲಿ ರಜೆ (Holiday) ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ರಜೆ ಘೋಷಣೆಯಾಗಿದೆ?

ಸಾಗರ: ಆ.29ರಂದು ಸಾಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶಿಸಿದ್ದಾರೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಹೊಸನಗರ: ಆ.29ರಂದು ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ » ಲಿಂಗನಮಕ್ಕಿ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಬದಲಾಯ್ತು ಜೋಗದ ಲುಕ್‌, ಎಷ್ಟು ನೀರು ಹೊರ ಬಿಡಲಾಗ್ತಿದೆ?

ಶಿವಮೊಗ್ಗ: ಆ.29ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಶಿಕಾರಿಪುರ: ಆ.29ರಂದು ಶಿಕಾರಿಪುರ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸೊರಬ: ಆ.29ರಂದು ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

Holiday Declared in five taluks 

Leave a Comment