ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದೂ ಮಳೆ ಮುಂದುವರೆಯಲಿದೆ. ಸದ್ಯಕ್ಕೆ ಹವಾಮಾನ ಇಲಾಖೆಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಜೋರು ಮಳೆ ಮತ್ತು ವೇಗದ ಮೇಲ್ಮೈ ಗಾಳಿ ಇರಲಿದೆ ಎಂದು ತಿಳಿಸಲಾಗಿದೆ. (Weather)
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಕಳೆದ ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಘಾ ಮಳೆ ಅಬ್ಬರಿಸುತ್ತಿದೆ. ಇವತ್ತು ಈ ಮಳೆಯ ಕೊನೆಯ ದಿನ. ಇಂದೂ ಜೋರು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ಕಡಿಮೆಯಾಗಿದೆ.

ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟಿದೆ ಉಷ್ಣಾಂಶ?
- ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
- ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
- ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ರಜೆ, ಕಾಲೇಜಿಗೆ ಎಲ್ಲೆಲ್ಲಿ ರಜೆ ಇದೆ? ಇಲ್ಲಿದೆ ಡಿಟೇಲ್ಸ್
Shivamogga Weather Report

