ಶಿವಮೊಗ್ಗ ಲೈವ್
ಶಿವಮೊಗ್ಗ: 100 ಅಡಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು (Tree) ಧರೆಗುರುಳಿದೆ. ಅದೃಷ್ಟವಶಾತ್ ಅನಾಹುತ ತಪ್ಪಿದೆ.
ಲಕ್ಷ್ಮೀ ಟಾಕೀಸ್ ಸಮೀಪ ಫ್ರೀಡಂ ಪಾರ್ಕ್‌ನ ಕಾಂಪೌಂಡ್ ಪಕ್ಕದಲ್ಲಿಯೆ ಇದ್ದ ಮರ ಧರೆಗುರುಳಿದೆ. ಗಾಳಿ, ಮಳೆಯಿಂದಾಗಿ ಮರ ಉರುಳಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಟ್ರಾಫಿಕ್ ಸಿಗ್ನಲ್ ಬಿಟ್ಟ ಕೆಲವೇ ಕ್ಷಣದಲ್ಲಿ ಮರ ಉರುಳಿದೆ. ಹಾಗಾಗಿ ರಸ್ತೆಯಲ್ಲಿ ವಾಹನಗಳು ಇರಲಿಲ್ಲ. ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಇದನ್ನೂ ಓದಿ » ಲಿಂಗನಮಕ್ಕಿ ಡ್ಯಾಂಗೆ ಹೆಚ್ಚಿದ ಒಳ ಹರಿವು, ತುಂಗಾ, ಭದ್ರಾಗೆ ಎಷ್ಟು ನೀರು ಹರಿದು ಬರ್ತಿದೆ? ಇಲ್ಲಿದೆ ಡಿಟೇಲ್ಸ್
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಮರ ತೆರವು ಕಾರ್ಯಚರಣೆ ನಡೆಯುತ್ತಿದೆ. ಇನ್ನು, ಮರ ಉರುಳಿರುವುದರಿಂದ ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮತ್ತೊಂದು ಬದಿಯಲ್ಲಿ ಎರಡು ದಿಕ್ಕಿನಲ್ಲಿ ವಾಹನಗಳು ಸಂಚರಿಸುತ್ತಿವೆ. ಹಾಗಾಗಿ ಲಕ್ಷ್ಮೀ ಟಾಕೀಸ್ ಸಮೀಪ ಸಂಚಾರ ದಟ್ಟಣೆ ಉಂಟಾಗಿದೆ.
