ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಹೆಚ್ಚಿದ ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ: ಕಳೆದ ಮೂರ್ನಾಲ್ಕು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಇಂದಿನಿಂದ ತಗ್ಗಲಿದೆ. ಹವಾಮಾನ ಇಲಾಖೆ ಜಿಲ್ಲೆಗೆ ಇವತ್ತು ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ. (Weather)

ಶಿವಮೊಗ್ಗ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನದಿಂದ ಭಾರಿ ಮಳೆಯಾಗಿತ್ತು. ಶುಕ್ರವಾರದಿಂದ ಮಳೆ ಕಡಿಮೆಯಾಗಿದ್ದು, ಇವತ್ತು ಮಳೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿ, ಆಯನೂರು, ಹಾರನಹಳ್ಳಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ, ಯಾವ್ಯಾವ ದಿನ ಎಲ್ಲೆಲ್ಲಿ ಡ್ರೈ ಡೇ?

Shivamogga Weather report 

Leave a Comment