ಶಿವಮೊಗ್ಗ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಇವತ್ತು ಏನಿದೆ ಅಲರ್ಟ್?‌ ತಾಪಮಾನ ಎಷ್ಟಿರುತ್ತೆ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಿದೆ. ಇದರ ಬೆನ್ನಿಗೆ ಬಿಸಿಲು ಆವರಿಸಿದೆ. (Weather)

ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವು ದಿನದಿಂದ ಭಾರಿ ಮಳೆಯಾಗಿತ್ತು. ಆದರೆ ಎರಡು ದಿನದಿಂದ ಮಳೆ ಕಡಿಮೆಯಾಗಿದೆ. ಇನ್ನು, ಹವಾಮಾನ ಇಲಾಖೆ ಇವತ್ತು ಜಿಲ್ಲೆಗೆ ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ. ಆದರೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Kalleshwara-Enterprises.webp

WEATHER-REPORT-SHIMOGA-

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸರ್ಕಾರಿ ಆಂಬುಲೆನ್ಸ್‌ ಚಾಲಕನಿಗೆ ₹10,000 ದಂಡ, ಕಾರಣವೇನು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment