ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಏನಿದು ಪ್ರಕರಣ?

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ದೃಢಪಟ್ಟ ಹಿನ್ನೆಲೆ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ (Jail) ವಾಸ, 75 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಬಾಲಕಿಗೆ 4 ಲಕ್ಷ ರೂ. ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು 17 ವರ್ಷದ ಅಪ್ರಾಪ್ತೆ ನೀಡಿದ ದೂರಿನ ಮೇರೆಗೆ ಆತನ ವಿರುದ್ಧ ಪೋಕ್ಸ್‌ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಚ್. ಆರ್. ಶ್ರೀಧ‌ರ್ ವಾದಿಸಿದ್ದರು.

Shivamogga-Court-Balaraja-Urs-Road

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ, ದಾಖಲಾಯ್ತು FIR, ಯಾರ ವಿರುದ್ಧ? ಈತನಕ ಏನಾಯ್ತು?

20 years Jail for thirthahalli person

Leave a Comment