ಹವಾಮಾನ ವರದಿ: ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿತ್ತು. ಇವತ್ತು ಮತ್ತೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಜಿಲ್ಲೆಗೆ ಯಲ್ಲೋ ಅಲರ್ಟ್ ಪ್ರಕಟಿಸಿದೆ. (Weather)➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಕೆಲ ಹೊತ್ತು ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ. ಮೇಲ್ಮೈ ಗಾಳಿಯು ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ತಾಳಗುಪ್ಪ – ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ವೇಳಾಪಟ್ಟಿ ಬದಲು, ಹೊಸ ಟೈಮ್‌ಟೇಬಲ್ ಏನು? ಯಾವಾಗ ಜಾರಿ?
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.