MORNING NEWS: ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

MORNING NEWS: ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಪ್ರಮುಖ ಸುದ್ದಿಗಳು.

ಬಾನು ಮುಷ್ತಾಕ್‌ ಆಯ್ಕೆ ಮರುಪರಿಶೀಲನೆಗೆ ಒತ್ತಾಯ

FATAFAT-NEWS-1ಜಿಲ್ಲಾಧಿಕಾರಿ ಕಚೇರಿ: ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ನಿರ್ಧಾರ ಮರುಪರಿಶೀಲಿಸಲು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.

Shimoga City Morning News.

ಸಿಇಒಗೆ ಹಾರ, ತುರಾಯಿಯಿಂದ ಸನ್ಮಾನ

FATAFAT-NEWS-2ಪತ್ರಿಕಾ ಭವನ: ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹಿಂಜರಿಯುತ್ತಿರುವ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಸಾಂವಿಧಾನಿಕ ನಡೆ ಅನುಸರಿಸಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ(ಕೆ.ಆರ್.ಎಸ್.) ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಪಂವರೆಗೆ ಮೆರವಣಿಗೆಯಲ್ಲಿ ತೆರಳಿ ಹಾರ, ತುರಾಯಿಗಳಿಂದ ಸನ್ಮಾನಿಸಿ ಧೈರ್ಯ ತುಂಬಲಾಗುವುದು ಎಂದು ಪಕ್ಷದ ಕಾರ್ಯಕರ್ತ ಮಂಜುನಾಥ್ ಹಿರೇಚೌಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Shimoga City Morning News.

ರಾಜ್ಯಾದ್ಯಂತ ಸೀರತ್‌ ಅಭಿಯಾನ

FATAFAT-NEWS-3ಪತ್ರಿಕಾ ಭವನ: ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ಸೆ.3ರಿಂದ 14ರವರೆಗೆ ನ್ಯಾಯದ ಹರಿಕಾರ ಮಹಮ್ಮದ್ ಪೈಗಂಬರ್ ಶೀರ್ಷಿಕೆಯಡಿ ರಾಜ್ಯಾದ್ಯಂತ ಸೀರತ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಮುಹಮದ್ ಇಲಿಯಾಸ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೈಗಂಬರರ ಮಾನವೀಯತೆಯ ಸಂದೇಶಗಳನ್ನು ನಾಡಿನ ಜನರಿಗೆ ತಲುಪಿಸುವುದು ಅಭಿಯಾನದ ಪ್ರಮುಖ ಗುರಿ.

Shimoga City Morning News.

ಸವಿತಾ ಶಿರೋನಾಮೆ ಬಳಸುವಂತೆ ಒತ್ತಾಯ

FATAFAT-NEWS-4ಜಿಲ್ಲಾಧಿಕಾರಿ ಕಚೇರಿ: ಶೋಷಿತ ಸಮಾಜದ ಅಪಹಾಸ್ಯ ಪದವಾದ ‘ಹಜಾಮ’ ಎಂಬ ಪದವನ್ನು ಹಿಂದುಳಿದ ಜಾತಿಗಳ ಪಟ್ಟಿಯಿಂದ ಕೈಬಿಡಬೇಕು ಎಂದು ಆಗ್ರಹಿಸಿ ಇಂದು ಜಿಲ್ಲಾ ಸವಿತ ಸಮಾಜ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು. ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಆ ಪದ ಬಿಟ್ಟು ಸವಿತಾ ಎಂಬ ಬಳಸುವಂತೆ ಆದೇಶ ನೀಡಿತ್ತು. ಆದರೆ ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿರುವ ಹಿಂದುಳಿದ ಜಾತಿಗಳ ಪಟ್ಟಿಯಲ್ಲಿ ‘ಹಜಾಮ’ ಎಂಬ ಇನ್ನೂ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Shimoga City Morning News.

ಇದನ್ನೂ ಓದಿ » ಓಲಾ ಸ್ಕೂಟರ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗದ ಗ್ರಾಹಕ ನ್ಯಾಯಾಲಯ, ಮಹತ್ವದ ತೀರ್ಪು ಪ್ರಕಟ

ಬಂಜಾರ ಸಂಘದಿಂದ ಪ್ರತಿಭಾ ಪುರಸ್ಕಾರ

FATAFAT-NEWS-5ಬಂಜಾರ ಕನ್ವೆನ್ಷನ್‌ ಹಾಲ್:‌ ಜಿಲ್ಲಾ ಬಂಜಾರ ಸಂಘದಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ದೇವಾಲಯ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಉದ್ಘಾಟಿಸಿದರು. ಸೈನಾಭಗತ್ ಸೇವಾಲಾಲ್‌ ಸ್ವಾಮೀಜಿ, ಕೆ.ಬಿ.ಅಶೋಕ್‌ನಾಯ್ಕ, ಆಯನೂರು ಶಿವಾನಾಯ್ಕ, ಆ‌ರ್.ಸಿ.ನಾಯ್ಕ, ಹೀರಾನಾಯ್ಕ ಇತರರಿದ್ದರು.

Shimoga City Morning News.

ಒಳ ಮೀಸಲು ವಿರುದ್ಧ ಬಂಜಾರರ ಕಿಡಿ

FATAFAT-NEWS-6ಶಿವಮೊಗ್ಗ: ಒಳ ಮೀಸಲಾತಿಯನ್ನು (Reservation) ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಲಾಗಿದೆ. ಕೂಡಲೆ ಈ ವರ್ಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಬಂಜಾರ ಸಮಾಜ, ಗೋರ ಸೇನಾ ಸಂಘಟನೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿತು.

Banjara-protest-against-sub-categorisation

ಉಪನ್ಯಾಸಕ ಪ್ರವೀಣ್‌ಗೆ ಅಲ್ಲಮಶ್ರೀ ಪ್ರಶಸ್ತಿ

ATNC College lecturer Praveen BNಶಿವಮೊಗ್ಗ: ಬೆಂಗಳೂರಿನ ರಾಜಾಜಿನಗರದ ಬಸವೇಶ್ವರ ವಾಣಿಜ್ಯ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಮಸ್ಕತ್‌ನ ಬಸವಬಳಗದ ವತಿಯಿಂದ ಆಯೋಜಿಸಿದ್ದ ಶ್ರಾವಣ ಮಾಸದ ಶರಣಯಾನ ವಿಚಾರ ಮಂಥನ ಅಂತಾರಾಷ್ಟ್ರೀಯ ವಿಚಾರಧಾರೆ ಕಾರ್ಯಕ್ರಮದಲ್ಲಿ ಎಟಿಎನ್‌ಸಿ ಕಾಲೇಜಿನ ಕನ್ನಡ ಉಪನ್ಯಾಸಕ ಪ್ರವೀಣ್‌.ಬಿ.ಎನ್‌ ಅವರಿಗೆ ಅಲ್ಲಮಶ್ರೀ ಪ್ರಶಸ್ತಿ ನೀಡಲಾಗಿದೆ. ಗೋಷ್ಠಿಯಲ್ಲಿ ಪ್ರವೀಣ್‌.ಬಿ.ಎನ್‌. ಅವರು ಪ್ರಬಂಧ ಮಂಡಿಸಿದ್ದರು.

Shivamogga city Morning news

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 2, 2025

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

Leave a Comment