ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ಮಂಗಳವಾರ ಜಿಲ್ಲೆಯ ಹಲವೆಡೆ ಸಾಧಾರಣದಿಂದ ಜೋರು ಮಳೆಯಾಗಿದೆ. ಇನ್ನೊಂದೆಡೆ ಇವತ್ತೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಇಂದೂ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. (weather today)
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾಧಾರಣದಿಂದ ಜೋರು ಮಳೆಯಾಗಲಿದೆ. ಅಲ್ಲದೆ ಮೇಲ್ಮೈ ಗಾಳಿ ಜೋರಿರಲಿದೆ ಎಂದು ಅಲರ್ಟ್‌ನಲ್ಲಿ ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » IRCTC ಮೂಲಕ ಟಿಕೆಟ್ ಬುಕಿಂಗ್, ಮಹತ್ವದ ಅಪ್‌ಡೇಟ್ ನೀಡಿದ ರೈಲ್ವೆ ಇಲಾಖೆ ಅಧಿಕಾರಿ