ಭದ್ರಾವತಿ: ಹುಣಸೇಕಟ್ಟೆ 5 ಎಕರೆ ಗ್ರಾಮಠಾಣಾ ಜಾಗದಲ್ಲಿ ಶೀಘ್ರ ಸರ್ಕಾರಿ ಆಸ್ಪತ್ರೆ (hospital) ಮತ್ತು ಪೊಲೀಸ್ ಠಾಣೆ ನಿರ್ಮಿಸಬೇಕು. ಭೂ ಕಬಳಿಕೆ ತೆರವು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಂಯೋಜಕ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಹುಣಸೇಕಟ್ಟೆಯಲ್ಲಿ 5 ಎಕರೆ ಗ್ರಾಮ ಠಾಣಾ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಹೈಕೋರ್ಟ್ ಆದೇಶದಂತೆ ಅಲ್ಲಿ ಶೀಘ್ರ ಪೊಲೀಸ್ ಠಾಣೆ ಮತ್ತು ಸರ್ಕಾರಿ ಆಸ್ಪತ್ರೆ ನಿರ್ಮಿಸಬೇಕು ಎಂದು ಆಗ್ರಹಿಸಿದರು. ಹುಣಸೇಕಟ್ಟೆ ಬಿ.ಬಿ. ಮೈನ್ಸ್ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು, ಕಾಳಿಂಗನಹಳ್ಳಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸಮಿತಿಯ ಜಿಲ್ಲಾ ಸಂಯೋಜಕ ಆರ್.ಜಗದೀಶ್, ಪ್ರಮುಖರಾದ ವಿರೂಪಾಕ್ಷಪ್ಪ, ಚೌಡಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.

ಇದನ್ನೂ ಓದಿ » ಆಧಾರ್ ಕಾರ್ಡ್ ಕುರಿತು ಮಹತ್ವದ ಅಪ್‌ಡೇಟ್, ಈಗಲೆ ದಾಖಲೆ ಒದಗಿಸುವಂತೆ ಸಾರ್ವಜನಿಕರಿಗೆ ಸೂಚನೆ

build hospital and police station at hunasekatte
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





