ಸಾಗರ: ಹಿಂದುಳಿದ ವರ್ಗದವರ ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಪತ್ರ ಬರೆದಿದ್ದ ಯಡಿಯೂರಪ್ಪ, ವಿಜಯೇಂದ್ರ, ಹರತಾಳು ಹಾಲಪ್ಪ ಅವರಿಗೆ ಧರ್ಮಸ್ಥಳ (dharmasthala) ಯಾತ್ರೆ ಮಾಡುವ ನೈತಿಕತೆ ಇಲ್ಲ. ಓಟ್ ಬ್ಯಾಂಕ್‌ಗಾಗಿ ಯಾತ್ರೆ ನಡೆಸುತ್ತಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನೆಹರು ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಿಗಂದೂರು ದೇವಸ್ಥಾನವನ್ನು ಮುಳುಗಿಸಲು ಪ್ರಯತ್ನ ಮಾಡಿದವರು ಈಗ ಧರ್ಮಸ್ಥಳ ಉಳಿಸಿ ಯಾತ್ರೆ ಮಾಡುತ್ತಿದ್ದಾರೆ. ಎಸ್‌ಐಟಿ ರಚನೆಯಾದಾಗ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರು ಸ್ವಾಗತಿಸಿದ್ದರು. ಈಗ ಎನ್‌ಐಎ ತನಿಖೆಗೆ ವಹಿಸಿ ಎಂದು ಆಗ್ರಹಿಸುತ್ತಿದ್ದಾರೆ. ಇದು ಬಿಜೆಪಿಯ ಇಬ್ಬಗೆಯ ನೀತಿ ತೋರಿಸುತ್ತದೆ.
ಪಿತೂರಿ ಮಾಡಿದವರೆಲ್ಲ ಜೈಲು ಸೇರುತ್ತಿದ್ದಾರೆ

ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದರಿಂದ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಬಯಲಿಗೆ ಬಂದಿದೆ. ಪಿತೂರಿ ನಡೆಸಿದವರು ಒಬ್ಬೊಬ್ಬರಾಗಿ ಜೈಲುಗೆ ಹೋಗತ್ತಿದ್ದಾರೆ. ಇನ್ನಷ್ಟು ಪ್ರಮುಖರ ಮುಖವಾಡ ಬಯಲಿಗೆ ಬರಲಿದೆ ಎಂದರು.
ಭಾರಿ ಮಳೆಯಿಂದಾಗಿ ಮಲೆನಾಡಿನ ಅಡಿಕೆ ಬೆಳೆಗಾರರಿಗೆ ತೀವ್ರ ಸಮಸ್ಯೆಯಾಗಿದೆ. ಬೆಳೆಗಾರರಿಗೆ ನೆರವಾಗಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದೇವೆ. ಮಲೆನಾಡು ಭಾಗದ ಶಾಸಕರು ಮುಖ್ಯಮಂತ್ರಿ ಭೇಟಿಯಾಗಿ ವಿಶೇಷ ಅನುದಾನಕ್ಕೆ ಮನವಿ ಮಾಡಲಿದ್ದೇವೆ.
– ಬೇಳೂರು ಗೋಪಾಲಕೃಷ್ಣ, ಶಾಸಕ
ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇ, ಪೇಟಿಯಂನಲ್ಲಿ ಮಹತ್ವದ ಬದಲಾವಣೆಗೆ NPCI ಸೂಚನೆ
MLA angry against bjp dharmasthala yatre
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





