ಹೊಳೆಹೊನ್ನೂರು: ಗಣಪತಿ ಬಿಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ (10 Year) ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೋಮವಾರ ನಡೆದಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇಟ್ಟಿಗೆಹಳ್ಳಿಯ ಕುಶಾಲ್ (10) ಮೃತ ಬಾಲಕ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಸ್ವತಃ ಗಣಪನ ಮೂರ್ತಿ ತಯಾರು ಮಾಡಿ ಪೂಜೆ ಸಲ್ಲಿಸಿದ್ದರು. ಸೋಮವಾರ ಸಂಜೆ ವೇಳೆಗೆ ಗಣಪನನ್ನು ಭದ್ರಾ ನಾಲೆಗೆ ವಿಸರ್ಜನೆ ಮಾಡುವಾಗ ಅವಘಡ ನಡೆದಿದೆ.
ಪಾಲಕರಿಗೆ ತಿಳಿಸದೆ ಮೂರು ಮಕ್ಕಳು ನಾಲೆಗೆ ತೆರಳಿದ್ದಾರೆ ಎನ್ನಲಾಗುತ್ತಿದ್ದು. ನಾಲೆಯಲ್ಲಿ ಗಣಪತಿ ಬಿಡುವಾಗ ಆಯಾತಪ್ಪಿದ ಬಾಲಕ ಕುಶಾಲ್ ನಾಲೆಗೆ ಬಿದ್ದಿದ್ದಾನೆ ಎನ್ನಲಾಗುತ್ತಿದೆ. ಸ್ಥಳೀಯರು ನಾಲೆಯಲ್ಲಿ ಹುಡುಕಾಡಿ ಶವ ಹೋರ ತೆಗೆದಿದ್ದಾರೆ. ಇಟ್ಟಿಗೆಹಳ್ಳಿಯಲ್ಲಿ ಬಾಲಕ ಕುಶಾಲ್‌ನ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ, ಗರ್ಭ ಧರಿಸಿದ ಬಾಲಕಿ, ಅಪ್ರಾಪ್ತನ ವಿರುದ್ಧ ಕೇಸ್
10 year boy succumbed during ganesha immersion
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





