ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ಮೈಸೂರಿನಲ್ಲಿ ನಡೆಯಲಿರುವ ದಸರಾ ಹಬ್ಬದ ಸಂದರ್ಭ ನಿರೀಕ್ಷಿತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು, ನೈಋತ್ಯ ರೈಲ್ವೆಯು (railway) ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 2ರವರೆಗೆ ಕೆಲವು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ ಒದಗಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ್ಯಾವ ರೈಲು? ಎಲ್ಲೆಲ್ಲಿ ನಿಲುಗಡೆ?
ರೈಲು ಸಂಖ್ಯೆ 16225/16226 ಮೈಸೂರು–ಶಿವಮೊಗ್ಗ ಟೌನ್–ಮೈಸೂರು ಎಕ್ಸ್ ಪ್ರೆಸ್: ಈ ರೈಲು ಬೆಳಗುಳ, ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಟ್, ಸಾಗರಕಟ್ಟೆ, ಡೋರನಹಳ್ಳಿ, ಹಂಪಾಪುರ, ಅರ್ಜುನಹಳ್ಳಿ ಹಾಲ್ಟ್, ಹೊಸ ಅಗ್ರಹಾರ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ರೈಲು ಸಂಖ್ಯೆ 16222/16221 ಮೈಸೂರು–ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್: ಈ ರೈಲು ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಟ್, ಡೋರನಹಳ್ಳಿ, ಹಂಪಾಪುರ ಮತ್ತು ಅರ್ಜುನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸಂಖ್ಯೆ 17301/17302 ಮೈಸೂರು–ಬೆಳಗಾವಿ–ಮೈಸೂರು ಎಕ್ಸ್ ಪ್ರೆಸ್: ಈ ರೈಲು ಬೆಳಗುಳ, ಸಾಗರಕಟ್ಟೆ, ಹೊಸ ಅಗ್ರಹಾರ, ಅಕ್ಕಿಹೆಬ್ಬಾಳು, ಬೀರಹಳ್ಳಿ ಹಾಲ್ಟ್, ಮಂದಗೆರೆ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಇದನ್ನೂ ಓದಿ » ಆಧಾರ್ ಕಾರ್ಡ್ ಕುರಿತು ಮಹತ್ವದ ಅಪ್ಡೇಟ್, ಈಗಲೆ ದಾಖಲೆ ಒದಗಿಸುವಂತೆ ಸಾರ್ವಜನಿಕರಿಗೆ ಸೂಚನೆ
ಹಬ್ಬದ ಸಂದರ್ಭ ಪ್ರಯಾಣಿಕರ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಈ ವ್ಯವಸ್ಥೆಗಳನ್ನು ತಾತ್ಕಾಲಿಕವಾಗಿ ಮಾಡಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸುವಾಗ ಈ ತಾತ್ಕಾಲಿಕ ನಿಲುಗಡೆಗಳನ್ನು ಗಮನದಲ್ಲಿಟ್ಟುಕೊಳ್ಳಲು ಸೂಚಿಸಲಾಗಿದೆ.

railway
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು













