ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ, ಏನೆಲ್ಲ ಕಲಿಸಲಾಗುತ್ತದೆ? ಅರ್ಜಿ ಸಲ್ಲಿಸೋದು ಹೇಗೆ?

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ.15 ರಿಂದ ಅ.14ರ ವರೆಗೆ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (Bakery) ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲಾಭಿವೃದ್ಧಿ ತರಬೇತಿ ಆಯೋಜಿಸಿದೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಏನೆಲ್ಲ ತರಬೇತಿ ನೀಡಲಾಗುತ್ತೆ?

ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರೂಟ್‌ ಕೇಕ್, ಸ್ಪಾಂಜ್‌ ಕೇಕ್, ಜೆಲ್‌ ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಖಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ತರಬೇತಿ ಶುಲ್ಕ ₹4,500 ಪಾವತಿಸಿ, ಸೆ.13 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು?

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಎಸ್‌. ಜಯಶ್ರೀ – 9449187763 ಮತ್ತು ಜಯಶಂಕರ–9686555897 ಅವರನ್ನು ಸಂಪರ್ಕಿಸಬಹುದು.

Prashanth-Loan-Advertisement.

Bakery items preparation training

Agriculture-University-Iruvakki-sagara-campus-board

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment