ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC BANK) ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಶೇ.3ರ ಬಡ್ಡಿ ದರದಲ್ಲಿ ಗರಿಷ್ಠ ₹80,000ದವರೆಗೆ ಮಧ್ಯಮಾವಧಿ ಪಶುಸಂಗೋಪನೆ ಸಾಲ (Dairy farmers loan) ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿಮುಲ್ ಮತ್ತು ಡಿಸಿಸಿ ಬ್ಯಾಂಕ್ ಒಪ್ಪಂದ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 542 ಹಾಲು ಉತ್ಪಾದಕ ಸಹಕಾರ ಸಂಘಗಳ ಖಾತೆಯನ್ನು ಬ್ಯಾಂಕಿನಲ್ಲಿ ತೆರೆಯಲಾಗಿದೆ. ವಿವಿಧ ಶಾಖೆಗಳಲ್ಲಿ 13,095 ಸದಸ್ಯರ ಉಳಿತಾಯ ಖಾತೆಗಳನ್ನು ತೆರೆಯಲಾಗಿದೆ ಎಂದರು.
ಹಾಲು ಉತ್ಪಾದಕರಿಗೆ ಹಲವು ಸೌಲಭ್ಯ
ಶೇ.3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಪಶು ಸಂಗೋಪನೆ ಸಾಲ ನೀಡಲಾಗುತ್ತಿದೆ. ಹಾಲು ಉತ್ಪಾದಕರಿಗೆ ಡಿಸಿಸಿ ಬ್ಯಾಂಕ್‌ನಿಂದ ವಿವಿಧ ಸೌಲಭ್ಯ ಒದಗಿಸಲಾಗುತ್ತಿದೆ. ಪಶು ಸಂಗೋಪನೆಗಾಗಿ 514 ಸದಸ್ಯರಿಗೆ ₹105 ಲಕ್ಷ ಸಾಲ ನೀಡಲಾಗಿದೆ ಎಂದು ತಿಳಿಸಿದರು.

ಹಾಲು ಉತ್ಪಾದಕರಿಗೆ ಪ್ರತಿ ಯುನಿಟ್‌ಗೆ ₹80,000 ಸಾಲ ನೀಡಲಾಗುತ್ತಿದೆ. ಒಬ್ಬರಿಗೆ ಎರಡು ಯುನಿಟ್‌ನಂತೆ ಒಟ್ಟು ₹1.60 ಲಕ್ಷ ಸಾಲ ನೀಡಲಾಗುತ್ತದೆ. ವಿವಿಧ ತಳಿಯ ಹಸು ಮತ್ತು ಎಮ್ಮೆ ಖರೀದಿಗೆ ಈ ಸಾಲ ನೀಡಲಾಗುತ್ತದೆ. ಜೆರ್ಸಿ, ಗಿರ್ ಸೇರಿದಂತೆ ವಿವಿಧ ತಳಿಯ ಹಸುಗಳನ್ನು ಗುರುತಿಸಲಾಗಿದೆ. ಇವುಗಳನ್ನು ಸಾಕಲು ಬಡ್ಡಿರಹಿತವಾಗಿ ವರ್ಷಿಕ ₹18,000 ನೀಡಲಾಗುತ್ತದೆ.
– ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ
ಇದನ್ನೂ ಓದಿ » ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ ಡಿಸಿಸಿ ಬ್ಯಾಂಕ್, ಇನ್ಮುಂದೆ ರೈತರಿಗೆ UPI ಸೌಲಭ್ಯ, ಯಾವಾಗ ಶುರು?
Dairy farmers loan from Shimoga DCC Bank
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





