ಭದ್ರಾವತಿ: ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್ ಘೋಷಣೆ (slogan) ಕೂಗಿರುವ ವಿಡಿಯೋ ವೈರಲ್ ಆಗಿದೆ. ಭದ್ರಾವತಿಯಲ್ಲಿ ಘೋಷಣೆ ಕೂಗಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವೈರಲ್ ವಿಡಿಯೋದಲ್ಲಿ ಏನಿದೆ?
ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್ ಟಾರ್ಚ್‌ಗಳನ್ನು ಹಿಡಿದು ನಿಂತಿದ್ದಾರೆ. ಮಧ್ಯದಲ್ಲಿದ್ದ ಯುವಕರ ಪೈಕಿ ಕೆಲವರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.
ದಾಖಲಾಗಲಿದೆ ಎಫ್‌ಐಆರ್
ಇನ್ನು, ವಿಡಿಯೋ ವೈರಲ್ ಬೆನ್ನಿಗೆ ಪೊಲೀಸ್ ಇಲಾಖೆ ಎಫ್‌ಐಆರ್ ದಾಖಲಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ರವಾನಿಸಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಭದ್ರಾವತಿಯಲ್ಲಿ ನಿನ್ನೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಭದ್ರಾವತಿಯಲ್ಲಿ ಎಫ್‌ಐಆರ್ ದಾಖಲಿಸಲಾಗುತ್ತಿದೆ. ಘೋಷಣೆ ಕೂಗಿದವರು ಯಾರು, ವಿಡಿಯೋದ ಅಸಲಿಯತ್ತನ್ನು ಪರಿಶೀಲಿಸಾಗುತ್ತಿದೆ. ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ಬಾಲಕ, ಬಾಲಕಿ ರಕ್ಷಣೆ, ಏನಿದು ಕೇಸ್?
pro pakistan slogan in bhadravathi
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






