ಭದ್ರಾವತಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ (Pakistan) ಘೋಷಣೆ ಕುಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಎಸ್‌.ಪಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌

point-1ಇಂದು ಬೆಳಗ್ಗೆ 8.30ರ ಹೊತ್ತಿಗೆ 12 ಸಕೆಂಡ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದು ನಮ್ಮ ಗಮನಕ್ಕೆ ಬಂದಿದೆ. ಭದ್ರಾವತಿಯಲ್ಲಿ ನಿನ್ನೆ ನಡೆದ ಮೆರವಣಿಗೆ ಸಂದರ್ಭದ್ದು ಮತ್ತು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಎಸ್‌.ಪಿ ತಿಳಿಸಿದರು.

point-2ಈ ವಿಡಿಯೋ ಸಂಬಂಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಅರ್‌ ದಾಖಲಿಸಿಕೊಂಡಿದ್ದೇವೆ. ವಿಡಿಯೋದಲ್ಲಿ ಯಾರೆಲ್ಲ ಇದ್ದಾರೆ ಎಂದು ಗುರುತಿಸಲಾಗುತ್ತಿದೆ. ವಿಡಿಯೋ ಚಿತ್ರೀಕರಿಸಿದ್ದು ಯಾರು? ಸ್ಥಳ ಯಾವುದು? ಎಂದು ಪತ್ತೆ ಮಾಡಲು ಮೂವರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಹೇಳಿದರು.

090925 SP Mithun Kumar Speaks about Bhadravathi Pro Pak slogan 1

point-3ವಿಡಿಯೋವನ್ನು ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನೊಂದೆಡೆ ವಿಡಿಯೋದಲ್ಲಿ ಇರುವವರನ್ನು ವಶಕ್ಕೆ ಪಡೆಯಲಿದ್ದೇವೆ. ಆ ಬಳಿಕ ಮುಂದಿನ ಅಪ್‌ಡೇಟ್‌ ನೀಡಲಿದ್ದೇವೆ ಎಂದರು. 

point-4ಮೆರವಣಿಗೆ ಸಂಪೂರ್ಣ ಭಾಗವನ್ನು ಪೊಲೀಸ್‌ ಕ್ಯಾಮರಾಗಳು, ವಿಡಿಯೋ ಜೊತೆಗೆ ಧ್ವನಿ ಮುದ್ರಣವಾಗುವ ಸಿಸಿ ಕ್ಯಾಮರಾ, ಡ್ರೋಣ್‌ನಲ್ಲಿ ಸೆರೆ ಹಿಡಿದಿದ್ದೇವೆ. ಅವುಗಳನ್ನು ಪರಿಶೀಲಿಸುತ್ತೇವೆ. ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದರು. 

Prashanth-Loan-Advertisement.

ಇದನ್ನೂ ಓದಿ » ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ, ವಿಡಿಯೋ ವೈರಲ್‌

SP Mithun Kumar reaction about pro Pakistan slogans

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 9, 2025 at 12:41 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 9, 2025

Leave a Comment