ಪತ್ರಿಕಾ ಹೇಳಿ ಬಿಡುಗಡೆ ಮಾಡಿರುವ ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಘವೇಂದ್ರ ಏನೆಲ್ಲ ಪ್ರಸ್ತಾಪಿಸಿದ್ದಾರೆ?
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ಆತಂಕ ಮೂಡಿಸಿವೆ ತುಷ್ಟೀಕರಣ, ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ದೇಶವಿರೋಧಿ ಚಟುವಟಿಕೆಗಳನ್ನು, ದುಷ್ಕರ್ಮಿಗಳನ್ನು ಮಟ್ಟ ಹಾಕದೆ ಪೋಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಶಾಸಕ ಸಂಗಮೇಶ್ವರ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವ ಆಸೆ ಇದೆ ಎಂದು ಹೇಳಿಕೆ ನೀಡಿರುವುದು ಕಾಂಗ್ರೆಸ್‌ನ ಅತಿಯಾದ ಓಲೈಕೆಗೆ ಉದಾರಹಣೆ ಎಂದು ಸಂಸದ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಸೈನಿಕರು ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಶತ್ರು ರಾಷ್ಟ್ರದ ವಿರುದ್ಧ ಸಮರ ಸಾರಿದ್ದಾರೆ. ಆದರೆ ನಮ್ಮ ರಾಜ್ಯದ ಒಳಗೆ ಪಾಕಿಸ್ತಾನದ ಪರ ಘೋಷಣೆ ಕೂಗುತ್ತಿದ್ದಾರೆ. ಇದನ್ನು ನೋಡಿಯು ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಇದು ನಾಚಿಕೆಗೇಡಿಸ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಮೇಶ್ವರಂ ಕೆಫೆ ಸ್ಪೋಟ, ವಿಧಾನಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ ಸೇರಿದಂತೆ ಇತ್ತೀಚೆಗೆ ಮದ್ದೂರಿನಲ್ಲಿ ಗಲಭೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತ್ರ ‘ಅವರು ಶಾಂತಿಪ್ರಿಯರುʼ ಎಂದು ಹೇಳಿಕೆ ನೀಡುತ್ತಿದ್ದಾರೆ. ಪರಿಸ್ಥಿತಿ ಕೈ ಮೀರುವ ಮೊದಲು ಭದ್ರಾವತಿಯಲ್ಲಿ ನಡೆದ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ರಾಘವೇಂದ್ರ ಆಗ್ರಹಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ನೂತನ ಅಪರ ಜಿಲ್ಲಾಧಿಕಾರಿ, ಅಧಿಕಾರ ಸ್ವೀಕಾರ