ಸೊರಬ, ಶಿವಮೊಗ್ಗ, ತೀರ್ಥಹಳ್ಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಸೆ.13ರಂದು ಮಧ್ಯಾಹ್ನ ಸೊರಬದ ರಂಗಮಂದಿರದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮತ್ತು ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸೆ.14ರಂದು ಬೆಳಗ್ಗೆ 10ಕ್ಕೆ ತೀರ್ಥಹಳ್ಳಿಯ ಬಸವಾನಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಭಾ ಭವನ, ಕಚೇರಿ, ಗೋದಾಮು ಉದ್ಘಾಟಿಸಲಿದ್ದಾರೆ. ಬಳಿಕ ತೀರ್ಥಹಳ್ಳಿಯಿಂದ ರಾಣೇಬೆನ್ನೂರಿಗೆ ತೆರಳಲಿದ್ದಾರೆ.‌

Nanjappa Hospital Advertisement

JNNCE-Admission-Advt-scaled

ಇದನ್ನೂ ಓದಿ » ಎಗ್‌ ರೈಸ್‌ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್‌ ನಾಪತ್ತೆ, ಎಲ್ಲಿ?

Prashanth-Loan-Advertisement.

Minister Madhu Bangarappa tour

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment