ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ದಸರಾ ಹಬ್ಬದ ಹಿನ್ನೆಲೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು (Special Train) ಮೂರು ಟ್ರಿಪ್ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
ದಸರಾ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಲಾಗಿದೆ.
ವಿಶೇಷ ರೈಲಿನ ಟೈಮಿಂಗ್ ಏನು?
ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ಎಕ್ಸ್ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 19, 26 ಮತ್ತು ಅಕ್ಟೋಬರ್ 3 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ.
ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 20, 27 ಮತ್ತು ಅಕ್ಟೋಬರ್ 4 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ಎಲ್ಲೆಲ್ಲಿ ಸ್ಟಾಪ್ ಇರಲಿದೆ?
ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಎಷ್ಟು ಬೋಗಿಗಳು ಇರಲಿವೆ?
ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್, ಹತ್ತು ಸ್ಲೀಪರ್ ಕ್ಲಾಸ್, ಐದು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್ಗಳು ಇರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಮೈಸೂರು ದಸರಾ, ಶಿವಮೊಗ್ಗದಿಂದ ಮೈಸೂರಿಗೆ ಎಷ್ಟು ರೈಲುಗಳಿವೆ? ಟೈಮಿಂಗ್ ಏನು? ಇಲ್ಲಿದೆ ಡಿಟೇಲ್ಸ್

Special Train
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















