ಆಗುಂಬೆ ಸಮೀಪ ಅಪಘಾತಕ್ಕೀಡಾದ ಕಾರಿನಲ್ಲಿ ಫೋನ್‌ಗಳು, ಪರ್ಸ್‌, ನಗದು ಕಳ್ಳತನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆಗುಂಬೆ: ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೊಬೈಲ್‌ ಫೋನ್‌ಗಳು (Smart Phones) ಮತ್ತು ಪರ್ಸ್‌ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಆಗುಂಬೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಜ್ಮಾನ್‌ ಎಂಬುವವರು ಸಹೋದರನಿಗೆ ತೀರ್ಥಹಳ್ಳಿಯ ನಾಟಿ ವೈದ್ಯರೊಬ್ಬರ ಬಳಿ ಚಿಕಿತ್ಸೆಗೆ ಕರೆತರುತ್ತಿದ್ದರು. ಕೌರಿಹಕ್ಲುವಿನಲ್ಲಿ ಕಾರು ಅಪಘಾತಕ್ಕೀಡಾಗಿ, ಕಾರಿನಲ್ಲಿದ್ದವರನ್ನು ಆಂಬುಲೆನ್ಸ್‌ನಲ್ಲಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಚಿಕಿತ್ಸೆ ಬಳಿಕ ಬಂದು ಪರಿಶೀಲಿಸಿದಾಗ ಕಾರಿನಲ್ಲಿದ್ದ ₹1.17 ಲಕ್ಷದ ಐ ಫೋನ್‌, ₹30 ಸಾವಿರದ ಸ್ಯಾಮ್‌ಸಂಗ್‌ ಫೋನ್‌, ಪರ್ಸ್‌ ಮತ್ತು ಅದರೊಳಗಿದ್ದ ₹15 ಸಾವಿರ ನಗದು ಕಳ್ಳತನವಾಗಿತ್ತು. ಈ ಸಂಬಂಧ ಕಾರು ಮಾಲೀಕ ಶಾಜ್ಮಾನ್‌ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಮನೆ ಬಳಿ ಬಂದ ಮಾಲೀಕನಿಗೆ ಕಾದಿತ್ತು ಶಾಕ್‌, ಆಗಿದ್ದೇನು?

JNNCE-Admission-Advt-scaled

Smart Phones theft from car

Leave a Comment