ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ, ಏನೆಲ್ಲ ಕಾರ್ಯಕ್ರಮ ಇರಲಿದೆ?

ಸಾಗರ: ಸಿಗಂದೂರು ಚೌಡೇಶ್ವರಿ (sigandur temple) ದೇವಸ್ಥಾನದಲ್ಲಿ ಸೆ.22ರಿಂದ ಅ.2ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಏನೆಲ್ಲ ಕಾರ್ಯಕ್ರಮ ಇರಲಿದೆ?

ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಪ್ರತಿ ದಿನ ದೇವಿಗೆ ಪ್ರಾತಃಕಾಲದಲ್ಲಿ ಪೂಜೆ, ತೈಲಾಭಿಷೇಕ, ಶೈಲಪುತ್ರಿ ಆರಾಧನೆ, ಶುದ್ದಿ ಪುಣ್ಯಾಹ, ಗಣಹೋಮ, ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ, ಮಹಾಭಿಷೇಕ, ಅಲಂಕಾರ ಪೂಜೆ ನೆಡೆಯಲಿದೆ.

ನವರಾತ್ರಿ ಪ್ರಯುಕ್ತ ದೇವಿಗೆ ನಿತ್ಯ ದುರ್ಗಾಹವನ, ಚಂಡಿಕಾ ಹೋಮ, ನವಚಂಡಿಕಾ ಹೋಮ, ಗುರುಗಳ ಆರಾಧನೆ ನೆಡೆಯಲಿದೆ. ಮಧ್ಯಾಹ್ನ 12.30ಕ್ಕೆ ನೈವೇದ್ಯ, ಸಂಜೆ 7.30ರಿಂದ ದೀಪೋತ್ಸವ, 8ರಿಂದ ಅಷ್ಟವಧಾನ ಸೇವೆ, ಮಹಾಮಂಗಳಾರಾತಿ ಜರುಗಲಿದೆ. ಧರ್ಮಾಧಿಕಾರಿ ಎಸ್.ರಾಮಪ್ಪ ನೇತೃತ್ವದಲ್ಲಿ ಕಾರ್ಯಕ್ರಮಗಳು ನೆಡೆಯಲಿವೆ.

Siganduru-Temple-Sagara

ಪ್ರತಿ ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಸತಿ ವ್ಯವಸ್ಥೆ, ದರ್ಶನ ನಿತ್ಯ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ತಿಳಿಸಿದ್ದಾರೆ.

JNNCE-Admission-Advt-scaled

ಇದನ್ನೂ ಓದಿ » ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್‌

navaratri utsava in sigandur temple

Leave a Comment