ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ನಾಡದೇವಿಯ ಮೆರವಣಿಗೆ? ಇಲ್ಲಿದೆ ಉದ್ಘಾಟನಾ ಕಾರ್ಯಕ್ರಮದ ಹೈಲೈಟ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ದಸರಾ ಸುದ್ದಿ: ಶಿವಮೊಗ್ಗ ದಸರಾಗೆ (Dasara 2025) ವೈಭವದ ಚಾಲನೆ ಸಿಕ್ಕಿದೆ. ಕೋಟೆ ರಸ್ತೆಯ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರು ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬವನ್ನು ಉದ್ಘಾಟಿಸಿದರು.

ಮೆರವಣಿಗೆ, ಕಲಾ ತಂಡಗಳು

ಸೋಮವಾರ ಬೆಳಗ್ಗೆ ಮಹಾನಗರ ಪಾಲಿಕೆ ಆವರಣದಿಂದ ಶಿವಪ್ಪನಾಯಕ ವೃತ್ತ, ಬಿ.ಹೆಚ್‌.ರಸ್ತೆಯಲ್ಲಿ ಬೆಳ್ಳಿ ಮಂಟಪ ಸಹಿತ ಚಾಮುಂಡೇಶ್ವರಿಯ ಮೆರವಣಿಗೆ ನಡೆಯಿತು.

ಶಾಸಕ ಎಸ್‌.ಎನ್.ಚನ್ನಬಸಪ್ಪ, ಪಾಲಿಕೆ ಕಮಿಷನರ್‌ ಮಾಯಣ್ಣಗೌಡ, ಮಾಜಿ ಕಾರ್ಪೊರೇಟರ್‌ಗಳು, ಪಾಲಿಕೆ ಅಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪೂರ್ಣ ಕುಂಭ ಹೊತ್ತ ಮಹಿಳೆಯರು, ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿದ್ದವು.

ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ದೇವಿಯ ಬೆಳ್ಳಿ ಮಂಟಪವನ್ನು ಪ್ರತಿಷ್ಠಾಪಿಸಲಾಯಿತು.

Shimoga Dasara 2025
ದಸರಾ ಮೆರವಣಿಗೆಯಲ್ಲಿ ಪೂರ್ಣ ಕುಂಭದೊಂದಿಗೆ ಮಹಿಳೆಯರು.

ದೇವಿಗೆ ಪೂಜೆ, ನಾಡಹಬ್ಬಕ್ಕೆ ಚಾಲನೆ

ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಕೂರಿಸಲಾಗಿರುವ ಗೊಂಬೆಗಳು ಮತ್ತು ದೇವಿಗೆ ಪ್ರಥಮ ಪೂಜೆ ನೆರವೇರಿಸಲಾಯಿತು.

ಬಳಿಕ ವೇದಿಕೆ ಮೇಲೆ ನಾಡ ದೇವಿಗೆ ಪೂಜೆ ಸಲ್ಲಿಸಿಲಾಯಿತು. ದಸರಾ ಉದ್ಘಾಟಕರಾದ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಸೇರಿದಂತೆ ವೇದಿಕೆ ಮೇಲಿದ್ದವರು ನಾಡದೇವಿಗೆ ಪುಷ್ಪನಮನ ಸಲ್ಲಿಸಿದರು.

ದೀಪ ಬೆಳಗಿದ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಶಿವಮೊಗ್ಗ ದಸರಾಗೆ ಚಾಲನೆ ನೀಡಿದರು.

ಸಹಚೇತನ ನಾಟ್ಯಾಲಯದ ಮಕ್ಕಳು ಶಿವಮೊಗ್ಗ ದಸರಾ ಗೀತೆ ನೃತ್ಯ ಪ್ರದರ್ಶನ ನೀಡಿದರು. ಅರುಣ್‌ ಕುಮಾರ್ ಮತ್ತು ತಂಡದವರು ಭಜನೆ ನಡೆಸಿಕೊಟ್ಟರು.

Shimoga Dasara 2025
ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಡದೇವಿಗೆ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರಿಂದ ಪೂಜೆ.

ಉದ್ಘಾಟಕರ ಭಾಷಣ ಹೈಲೈಟ್ಸ್‌

ನಾಡಹಬ್ಬವನ್ನು ಉದ‍್ಘಾಟಿಸಿದ ಬಳಿಕ ಭಾಷಣ ಮಾಡಿದ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು, ನಾಡಹಬ್ಬ ದಸರಾ ಉದ್ಘಾಟಿಸುವ ಸೌಭಾಗ್ಯ ಸಿಕ್ಕಿರುವುದು ನನಗೊಬ್ಬನಿಗೆ ಅಲ್ಲದೆ ಇಡೀ ಸೈನಿಕ ಸಮೂಹಕ್ಕೆ ಸಿಕ್ಕ ಗೌರವವಾಗಿದೆ ಎಂದರು.  

Shimoga Dasara 2025
ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರ ಭಾಷಣ.

ದೇಶ ಸೇವೆ ಸಲ್ಲಿಸುವಂತಹ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಮಕ್ಕಳು ಸೇನೆಗೆ ಸೇರುವ ಆಪೇಕ್ಷೆ, ಉತ್ಸುಕತೆ ತೋರಿದಾಗ ಪೋಷಕರು ನಿರಾಕರಿಸಬಾರದು ಎಂದು ತಿಳಿಸಿದರು.

ದಸರಾ ಎಂದರೆ ಸತ್ಯ, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ. ಆರಂಭದಲ್ಲಿ ಅನ್ಯಾಯ, ಅಧರ್ಮ ಎಷ್ಟೇ ವಿಜೃಂಭಿಸಿದರೂ ಕಡೆಗೆ ಗೆಲ್ಲುವುದು ಸತ್ಯ ಮತ್ತು ಪ್ರಾಮಾಣಿಕತೆ ಮಾತ್ರ. ಹಬ್ಬ ಸರ್ವರನ್ನೂ ಒಟ್ಟುಗೂಡಿ ಸುತ್ತದೆ. ನಾವೆಲ್ಲರೂ ಒಂದೇ ಎಂಬ ಮನೋಭಾವ ಬೆಳೆಸುತ್ತದೆ ಎಂದರು.

ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ಇವತ್ತು ಏನೇನಿದೆ? ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ

ಶಾಸಕ ಎಸ್.ಎನ್‌.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಹೆಚ್.ಎಂ.ಮಧು, ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

Dasara 2025

Shimoga Dasara 2025
ಶಿವಮೊಗ್ಗದಲ್ಲಿ ನಾಡದೇವಿಯ ಮೆರವಣಿಗೆ
Shimoga Dasara 2025
ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿ ಮೆರವಣಿಗೆಯಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ.
Shimoga Dasara 2025
ನಾಡದೇವಿಯ ಮೆರವಣಿಗೆಯಲ್ಲಿ ಕಲಾತಂಡಗಳು.
Shimoga Dasara 2025
ಕೋಟೆ ಚಂಡಿಕಾ ದುರ್ಗಾಪರಮೇಶ್ವರ ದೇಗುಲದಲ್ಲಿ ನಾಡದೇವಿ ಚಾಮುಂಡೇಶ್ವರಿಯ ಮಂಟಪ.
Shimoga Dasara 2025
ಸಹಚೇತನ ನಾಟ್ಯಾಲಯದ ಮಕ್ಕಳು ಶಿವಮೊಗ್ಗ ದಸರಾ ಗೀತೆ ನೃತ್ಯ ಪ್ರದರ್ಶನ

JNNCE-Admission-Advt-scaled

Shimoga Dasara 2025
ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರು.
Shimoga Dasara 2025
ಶಿವಮೊಗ್ಗ ದಸರಾಗೆ ಚಾಲನೆ
Shimoga Dasara 2025
ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರಿಗೆ ಗೌರವ

 

Shimoga Dasara 2025
ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರಿಗೆ ಮಾಜಿ ಯೋಧರಿಂದ ಗೌರವ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment