ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುರುಬರು ಸೇರಿದಂತೆ ಬೇರೆ ಸಮುದಾಯದವರನ್ನು ಪರಿಶಿಷ್ಟ ಪಂಗಡದ (ಎಸ್‌ಟಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಜಿಲ್ಲಾ ನಾಯಕ ವಾಲ್ಮೀಕಿ (Valmiki) ಸಂಘದ ನೇತೃತ್ವದಲ್ಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.
ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಗೆ ಅವರಿಗೆ ಮನವಿ ಸಲ್ಲಿಸಿದರು.
ವಾಲ್ಮೀಕಿ ಸಮುದಾಯದ ಡಿಮಾಂಡ್ ಏನು?
- ಹಿಂದುಳಿದ ವರ್ಗಗಳ ಪ್ರವರ್ಗ 1 ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕೋಲಿ ಜಾತಿಯವರಿಗೆ ನಾಯಕ ತಳವಾರರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದೆ. ಅದನ್ನು ಕೂಡಲೇ ನಿಲ್ಲಿಸಬೇಕು.
- ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಅನೇಕ ಜಾತಿಗಳು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿವೆ. ಈ ಒತ್ತಡಕ್ಕೆ ಸರ್ಕಾರ ಮಣಿಯಬಾರದು.

ಕುರುಬ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸು ಮಾಡುತ್ತಾರೆ. ನಾವು ಹೇಗೋ ಹೋರಾಟ ಮಾಡಿ ನಮ್ಮ ಮೀಸಲಾತಿಯನ್ನು ಶೇ 7.5ರಷ್ಟು ಪಡೆಯುತ್ತಿದ್ದೆವು. ಈಗ ಕುರುಬರು ನಮ್ಮ ಪರಿಶಿಷ್ಟ ವರ್ಗದ ಪಟ್ಟಿಗೆ ಬಂದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ.
- ಹೆಚ್.ಆರ್.ಹನುಮಂತಪ್ಪ, ವಾಲ್ಮೀಕಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ
![]()
ಮುಖಂಡರಾದ ಬಿ.ಎಸ್.ನಾಗರಾಜ್, ಹರೀಶ್, ಡಿ.ಬಿ.ಹಳ್ಳಿ ಬಸವರಾಜಪ್ಪ, ಶೇಖರಪ್ಪ, ಸುರೇಶ್, ಲಕ್ಷ್ಮಣಪ್ಪ, ನಿಜಲಿಂಗಪ್ಪ, ರಂಗಪ್ಪ, ಹನುಮಂತಪ್ಪ, ಗೋಪಿ, ದುರ್ಗಪ್ಪ, ಮಲ್ಲೇಶ್ ಸೇರಿದಂತೆ ಹಲವರಿದ್ದರು.
ಇದನ್ನೂ ಓದಿ » ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು, ಈತ ಮಾಡಿದ ಅಪರಾಧವೇನು?

Valmiki
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















