ಶಿವಮೊಗ್ಗ: ನಗರದ ಮತ್ತೊಂದು ರಸ್ತೆಯಲ್ಲಿ ವಾಹನಗಳಿಗೆ ಒನ್ ವೇ (One Way) ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿವಮೊಗ್ಗದ ಇಂದಿರಾ ಗಾಂಧಿ ರಸ್ತೆಯಲ್ಲಿ ಇನ್ಮುಂದೆ ಏಕಮುಖ ಸಂಚಾರ ಇರಲಿದೆ.
ಜಿಲ್ಲಾಧಿಕಾರಿ ಆದೇಶದಲ್ಲಿ ಏನಿದೆ?
ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಇರುವ ಇಂದಿರಾ ಗಾಂಧಿ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಗೆ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.
ಒನ್ ವೇ ಯಾವುದು?: ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು ಅವಕಾಶ ಇರಲಿದೆ.

ನೋ ಎಂಟ್ರಿ: ಇಂದಿರಾ ಗಾಂಧಿ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಯಿಂದ ಬಾಲರಾಜ್ ಅರಸ್ ರಸ್ತೆ ಕಡೆಗೆ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾರಿನಿಂದ ಹೊರಗೆಳೆದು ವೈದ್ಯನಿಗೆ ಥಳಿಸಿದ ಜನ, ಆಗಿದ್ದೇನು?
One Way Road in Shimoga city
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
